ಮಂಗಳವಾರ, ಏಪ್ರಿಲ್ 20, 2021
29 °C

ಡಿಸೆಂಬರ್‌ 25ಕ್ಕೆ ಒಟಿಟಿಯಲ್ಲಿ ‘ಭೂಮಿಕಾ’ ಸಿನಿಮಾ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೀರಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾದ ‘ಭೂಮಿಕಾ’ ಸಿನಿಮಾ ಕನ್ನಡ ಹಾಗೂ ತುಳುವಿನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವು ಡಿಸೆಂಬರ್ 25ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುತ್ತಿದೆ. ಛಾಯಾಗ್ರಾಹಕರಾದ ಪಿಕೆಎಚ್‌ ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ಮಂಗಳೂರಿನ ಸುತ್ತಮುತ್ತ 28 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಬೆಸ್ತರ ಹುಡುಗಿಯೊಬ್ಬಳ ಜೀವನದಲ್ಲಿ ನಡೆಯುವ ಕಥೆ ಇದು’ ಎಂದು ಸಿನಿಮಾದ ಕುರಿತು ಕಿರುಪರಿಚಯ ನೀಡುತ್ತಾರೆ ದಾಸ್‌.

ವೃತ್ತಿಯಲ್ಲಿ ವೈದ್ಯರಾಗಿರುವ ಸಾಗರ ಮೂಲದ ನರೇಂದ್ರ ನಾಯ್ಕ್‌ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ನಮ್ಮ ಫ್ಲಿಕ್ಸ್ ಓಟಿಟಿ ವೇದಿಕೆಯಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಹಿಂದೆ ‘ಭ್ರಮೆ’ ಚಿತ್ರ ಇದರಲ್ಲಿ ಬಿಡುಗಡೆಯಾಗಿತ್ತು.

ನವೀನ್ ಡಿ. ಪಡೀಲ್‌, ಆಲಿಷಾ ಅಂಡ್ರದೆ, ರವಿ ಕಿರಣ್ ಮೊದಲಾದವರು ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ರಾಜ್‌ಭಾಸ್ಕರ್ ಸಂಗೀತ ನಿರ್ದೇಶನ ಚಿತ್ರಕ್ಕಿದ್ದು, ಕೆ. ಎಂ. ಇಂದ್ರ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ನಿರ್ದೇಶನ ಜೊತೆಗೆ ಛಾಯಾಗ್ರಹಣದ ಜವಾಬ್ದಾರಿಯೂ ಪಿಕೆಎಚ್‌ ದಾಸ್ ಅವರದ್ದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು