ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಚಿತ್ರೋತ್ಸವ: ಜಬ್ಬಾರ್‌ ಪಟೇಲ್‌ ಉಪನ್ಯಾಸ

Published 29 ಫೆಬ್ರುವರಿ 2024, 16:20 IST
Last Updated 29 ಫೆಬ್ರುವರಿ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ(ಫೆ.29) ಚಾಲನೆ ದೊರಕಿದ್ದು, ಶುಕ್ರವಾರದಿಂದ(ಮಾರ್ಚ್‌ 1) ಸಿನಿಮಾಗಳ ಪ್ರದರ್ಶನ ಹಾಗೂ ಉಪನ್ಯಾಸ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. 

ಶುಕ್ರವಾರ ಮಧ್ಯಾಹ್ನ 2.30ಕ್ಕೆ ರಾಜಾಜಿನಗರದ ಒರಾಯನ್‌ ಮಾಲ್‌ನ ಸ್ಕ್ರೀನ್‌ ಮೂರರಲ್ಲಿ ಖ್ಯಾತ ನಿರ್ದೇಶಕ ಜಬ್ಬಾರ್‌ ಪಟೇಲ್‌ ಅವರ ಉಪನ್ಯಾಸವಿದೆ. ಅವರು ‘ಸಾಂವಿಧಾನಿಕ ಮೌಲ್ಯಗಳು ಮತ್ತು ಭಾರತೀಯ ಸಿನಿಮಾ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಒರಾಯನ್‌ ಮಾಲ್‌, ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಡಾ.ರಾಜ್‌ಕುಮಾರ್‌ ಭವನ ಹಾಗೂ ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಸಿನಿಮಾ ಅಕಾಡೆಮಿಯಲ್ಲಿ ಸಿನಿಮಾಗಳ ಪ್ರದರ್ಶನಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗೆ https://biffes.org/ ನೋಡಿ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT