‘ಬಿಗ್ಬಾಸ್’ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ ‘ಉಸಿರೇ ಉಸಿರೇ’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ ‘ಉಸಿರೇ ನನ್ನ ಉಸಿರೇ’ ಹಾಡು ಇತ್ತೀಚೆಗಷ್ಟೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಗೀತೆಗೆ ವಾಸುಕಿ ವೈಭವ್ ಧ್ವನಿಯಿದೆ.

‘ಇದು ನನ್ನ ಮೊದಲ ನಿರ್ಮಾಣದ ಚಿತ್ರ. ಈ ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಸ್ಫೂರ್ತಿ. ಕ್ಲೈಮ್ಯಾಕ್ಸ್ನಲ್ಲಿ ಸುದೀಪ್ ಸುಮಾರು 18 ನಿಮಿಷ ಕಾಣಿಸಿಕೊಳ್ಳುತ್ತಾರೆ’ ಎಂದರು ಎಂದರು ನಿರ್ಮಾಪಕ ಪ್ರದೀಪ್ ಯಾದವ್.

‘ಚಿತ್ರೀಕರಣ ಮುಕ್ತಾಯವಾಗಿದ್ದು, ನಂತರದ ಕೆಲಸಗಳು ನಡೆಯುತ್ತಿವೆ. ಸೆಪ್ಟೆಂಬರ್ನಲ್ಲಿ ಚಿತ್ರ ತೆರೆಗೆ ತರಲು ಆಲೋಚಿಸಿದ್ದೇವೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ತೆಲುಗಿನ ಖ್ಯಾತ ನಟರಾದ ಅಲಿ ಹಾಗೂ ಬ್ರಹ್ಮಾನಂದಂ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಇನ್ನೂ ಮುಂತಾದವರ ತಾರಾಬಳಗವಿದೆ’ ಎಂದರು ನಿರ್ದೇಶಕ ಸಿ.ಎಂ.ವಿಜಯ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.