ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜುಲೈ 12ಕ್ಕೆ ರಣಗಲ್‌ ಮೊದಲ ತುಣುಕು

Published 8 ಜುಲೈ 2024, 12:49 IST
Last Updated 8 ಜುಲೈ 2024, 12:49 IST
ಅಕ್ಷರ ಗಾತ್ರ

ಇದೇ ಶುಕ್ರವಾರ (ಜುಲೈ 12) ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್ ಜನ್ಮದಿನ. ಅಂದು ‘ಭೈರತಿ ರಣಗಲ್‌’ ಸಿನಿಮಾದ ಮೊದಲ ತುಣುಕು ಬಿಡುಗಡೆಯಾಗಲಿದೆ.

ಇತ್ತೀಚೆಗಷ್ಟೇ ಚಿತ್ರೀಕರಣ ಪೂರ್ಣಗೊಂಡಿತ್ತು. ಗೀತಾ ಶಿವರಾಜ್‌ಕುಮಾರ್‌ ಹಾಗೂ ಶಿವರಾಜ್‌ಕುಮಾರ್‌ ಅವರ ಸಮ್ಮುಖದಲ್ಲಿ ಚಿತ್ರತಂಡ ಕುಂಬಳಕಾಯಿ ಒಡೆದಿತ್ತು. ‘ಮಫ್ತಿ’ ಚಿತ್ರದ ಪ್ರೀಕ್ವೆಲ್‌ ಆಗಿರುವ ‘ಭೈರತಿ ರಣಗಲ್‌’ ಸಿನಿಮಾದ ಆಡಿಯೊ ಹಕ್ಕುಗಳನ್ನು ಆನಂದ್‌ ಆಡಿಯೊ ಖರೀದಿಸಿದೆ. ಗೀತಾ ಶಿವರಾಜ್‌ಕುಮಾರ್‌ ಅವರು ತಮ್ಮ ‘ಗೀತಾ ಪಿಕ್ಚರ್ಸ್‌’ ಲಾಂಛನದಲ್ಲಿ ನಿರ್ಮಾಣ ಮಾಡಿರುವ ‘ಭೈರತಿ ರಣಗಲ್‌’ ಸಿನಿಮಾಗೆ ನರ್ತನ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

ರವಿ ಬಸ್ರೂರು ಅವರ ಸಂಗೀತ ನಿರ್ದೇಶನ, ನವೀನ್‌ ಕುಮಾರ್‌ ಐ ಛಾಯಾಚಿತ್ರಗ್ರಹಣ, ಗುಣ ಅವರ ಕಲಾನಿರ್ದೇಶನ, ಚೇತನ್‌ ಡಿಸೋಜಾ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ‘ಮಫ್ತಿ’ ಚಿತ್ರದಲ್ಲಿದ್ದ ‘ಭೈರತಿ ರಣಗಲ್‌’ ಪಾತ್ರದ ಹಿನ್ನೆಲೆ ಈ ಸಿನಿಮಾದಲ್ಲಿದ್ದು, ‘ಭೈರತಿ ರಣಗಲ್‌’ ಪಾತ್ರದ ಕಥೆ ಇದರಲ್ಲಿದೆ. ಲಾಯರ್‌ ಧಿರಿಸಿನಲ್ಲಿ ಶಿವರಾಜ್‌ಕುಮಾರ್‌ ಅವರ ಫಸ್ಟ್‌ಲುಕ್‌ ಈಗಾಗಲೇ ಬಿಡುಗಡೆಯಾಗಿದ್ದು, ಚಿತ್ರದ ಕಥೆಯ ಬಗ್ಗೆ ಸಣ್ಣ ಸುಳಿವು ನೀಡಿದೆ. ಚಿತ್ರದಲ್ಲಿ ರುಕ್ಮಿಣಿ ವಸಂತ್‍, ರಾಹುಲ್ ಬೋಸ್‍, ಅವಿನಾಶ್‍ , ದೇವರಾಜ್‍, ಮಧು ಗುರುಸ್ವಾಮಿ, ಛಾಯಾ ಸಿಂಗ್‍, ಬಾಬು ಹಿರಣ್ಣಯ್ಯ ಮುಂತಾದ ಕಲಾವಿದರು ನಟಿಸಿದ್ದಾರೆ.         

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT