ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ್ಮದಿನ: ಇರುವಲ್ಲಿಂದಲೇ ಶುಭ ಹಾರೈಸುವಂತೆ ಅಭಿಮಾನಿಗಳಿಗೆ ಕಿಚ್ಚನ ಮನವಿ

Last Updated 28 ಆಗಸ್ಟ್ 2021, 8:10 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಲು ಆರಂಭಿಸಿದ್ದಾರೆ. ಆದರೆ, ಕೋವಿಡ್‌ ಕಾರಣಕ್ಕೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ.

ಈ ಕುರಿತು ಅಭಿಮಾನಿಗಳಿಗಾಗಿ ಸಂದೇಶವೊಂದನ್ನು ಹಂಚಿಕೊಂಡಿರುವ ಸುದೀಪ್‌, ‘ನನ್ನೆಲ್ಲಾ, ಪ್ರೀತಿಯ ಅಭಿಮಾನಿ ಸ್ನೇಹಿತರಲ್ಲಿ ಒಂದು ಮನವಿ. ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಈ ವರ್ಷವೂ ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಇರುವಲ್ಲಿಂದಲೇ ನಿಮ್ಮ ಪ್ರೀತಿಯ ಶುಭಾಶಯಗಳನ್ನು ತಿಳಿಸಿ ಎಂದು ಕೋರುತ್ತೇನೆ’ ಎಂದು ಹೇಳಿದ್ದಾರೆ.

ಹೌದು, ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಸುದೀಪ್‌, ಸೆ.2ರಂದು ತಮ್ಮ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅವರ ಕಾಮನ್ ಡಿಪಿ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT