ಶುಕ್ರವಾರ, ಜನವರಿ 27, 2023
25 °C

‘ಲಂಕಾಸುರ’ನಿಗೆ ಹ್ಯಾಪಿ ಬರ್ತ್‌ಡೇ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ ಡಿ. 3ರಂದು ನಡೆಯಿತು. ಈ ಬಾರಿಯ ಹುಟ್ಟುಹಬ್ಬದ ವಿಶೇಷವೆಂದರೆ, ವಿನೋದ್ ಪ್ರಭಾಕರ್ ಅವರು ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ಲಂಕಾಸುರ’ ಚಿತ್ರ ಸಹ ನಿರ್ಮಾಣವಾಗಿದೆ‌. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

‘ಇಂಡಸ್ಟ್ರೀಯ ಹುಲಿಯ ವಂಶ’ ಎಂಬ ಹಾಡನ್ನು ಬಿಡುಗಡೆ ಮಾಡುವ ಮೂಲಕ ‘ಲಂಕಾಸುರ’ ತಂಡ ವಿನೋದ್ ಪ್ರಭಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಚೇತನ್ ಆಲೂರ್ ಬರೆದಿರುವ ಈ ಹಾಡಿಗೆ ವಿಜೇತ್ ಕೃಷ್ಣ ಸಂಗೀತ ನೀಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಹಾಗೂ ಮದ್ವೇಶ್ ಈ ಹಾಡನ್ನು ಹಾಡಿದ್ದಾರೆ. ಪ್ರಮೋದ್ ಕುಮಾರ್ ‘ಲಂಕಾಸುರ’ ಚಿತ್ರದ ನಿರ್ದೇಶಕರು. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು