ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಆಸ್ಪತ್ರೆಗೆ ದಾಖಲು

Last Updated 8 ಏಪ್ರಿಲ್ 2023, 8:52 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕಿ, ಹಿರಿಯ ನಟಿ ಖುಷ್ಬೂ ಸುಂದರ್‌ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಖುಷ್ಬೂ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಆಸ್ಪತ್ರೆಯಲ್ಲಿರುವ ಕೆಲ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​​ಲೋಡ್ ಮಾಡಿದ್ದಾರೆ. ದೇಹದಲ್ಲಿ ತೀವ್ರ ನೋವು ಹಾಗೂ ನಿಶಕ್ತಿ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ತೀವ್ರ ಜ್ವರ ಇದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ, ಎರಡು ಮೂರು ದಿನಗಳಲ್ಲಿ ಜ್ಚರ ಕಡಿಮೆಯಾಗಿ ಆರೋಗ್ಯ ಸುಧಾರಿಸಲಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಖುಷ್ಬೂ ತಿಳಿಸಿದ್ದಾರೆ.

ಸಿನಿಮಾ ಸೆಲೆಬ್ರಿಗಳು ಹಾಗೂ ರಾಜಕಾರಣಿಗಳು ಬೇಗ ಗುಣಮುಖರಾಗಲಿ ಎಂದು ವಿಶ್ ಮಾಡಿದ್ದಾರೆ. ಇತ್ತೀಚೆಗೆ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT