ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಮೃಗ ಬೇಟೆ ಪ್ರಕರಣ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಬಿಗ್‌ ರಿಲೀಫ್

ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
Last Updated 12 ಫೆಬ್ರುವರಿ 2021, 7:33 IST
ಅಕ್ಷರ ಗಾತ್ರ

ಮುಂಬೈ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಜೋಧಪುರ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಸಲ್ಮಾನ್‌ ಖಾನ್‌ ತಮ್ಮ ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ‘ನನ್ನ ಎಲ್ಲ ಅಭಿಮಾನಿಗಳಿಗೆ, ನಿಮ್ಮ ಪ್ರೀತಿಯ ಬೆಂಬಲ ಮತ್ತು ಕಾಳಜಿಗೆ ಧನ್ಯವಾದಗಳು. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ನೋಡಿಕೊಳ್ಳಿ. ದೇವರು ನಿಮ್ಮನ್ನು ಸಹ ಆಶೀರ್ವದಿಸುತ್ತಾನೆ’ ಎಂದು ಟ್ವೀಟ್ ಮಾಡಿದ್ದಾರೆ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾ ಶೂಟಿಂಗ್ ವೇಳೆ ಜೋಧಪುರ್‌ ಬಳಿಯ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು. ಬೇಟೆಯಾಡಲು ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು. ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡಿರುವ ಸಂಬಂಧ ಸಲ್ಮಾನ್‌ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಸಲ್ಮಾನ್‌ ಖಾನ್‌, ವಿಡಿಯೊ ಕಾನ್ಫರೆನ್ಸ್‌ ಮೂಲಕ ಗುರುವಾರ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಧೀಶ ರಾಘವೇಂದ್ರ ಕಚ್ವಾಲ್‌ ನೇತೃತ್ವದ ಪೀಠ ವಿಚಾರಣೆ ನಡೆಸಿ. ಸಲ್ಮಾನ್‌ ಖಾನ್‌ ಅವರನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT