ಹಿರಿಯ ನಿರ್ದೇಶಕ ರಾಜೇಶ್ ಮೂರ್ತಿ ತಮ್ಮ ಪುತ್ರನಿಗಾಗಿ ನಿರ್ಮಿಸಿ, ನಿರ್ದೇಶಿಸಿರುವ ‘ಬ್ಲಡಿ ಬಾಬು’ ಚಿತ್ರ ಈ ತಿಂಗಳ ಅಂತ್ಯದಲ್ಲಿ ತೆರೆಗೆ ಬರಲಿದೆ. ಸೈಕಲಾಜಿಕಲ್, ಆ್ಯಕ್ಷನ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಿದು.

‘ಇತ್ತೀಚೆಗಷ್ಟೇ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. ಬಿಡುಗಡೆ ಸಿದ್ಧತೆ ನಡೆಸಿದ್ದೇವೆ. ಜೂನ್ ಕೊನೆಯ ವಾರ ಚಿತ್ರ ತೆರೆಗೆ ಬರಲಿದೆ’ ಎಂದಿದ್ದಾರೆ ನಿರ್ದೇಶಕರು.

ನಾಯಕ ಯಶಸ್ವಗೆ ಸ್ಮಿತಾ ಜೋಡಿಯಾಗಿದ್ದಾರೆ. ದಿಲೀಪ್ ಕುಮಾರ್, ನೆ.ಲ.ನರೇಂದ್ರ ಬಾಬು ಮುಂತಾದವರು ಚಿತ್ರದಲ್ಲಿದ್ದಾರೆ. ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು, ನಿತೀಶ್ ಕುಮಾರ್ ಸಂಗೀತ ಸಂಯೋಜನೆ, ವಿನೋದ್ ಆರ್. ಛಾಯಾಚಿತ್ರಗ್ರಹಣವಿದೆ. ಬೆಂಗಳೂರು, ನಂದಿ ಹಿಲ್ಸ್ ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.