ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾ ಶೂಟಿಂಗ್ ಸಮಯದಲ್ಲಿ ಬಿದ್ದು ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದ ಅಮೀರ್ ಖಾನ್

ಬಾಲಿವುಡ್ ನಟ ಅಮೀರ್ ಖಾನ್ ಹೊಸ ಸಿನಿಮಾದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್ ನಟ ಅಮೀರ್ ಖಾನ್ ಅವರು ಹೊಸ ಸಿನಿಮಾ ‘ಲಾಲ್ ಸಿಂಗ್ ಛಡ್ಡಾ‘ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಸಿನಿಮಾ ಏಪ್ರಿಲ್‌ನಲ್ಲಿ ಬಿಡುಗಡೆಗೆ ಉದ್ದೇಶಿಸಲಾಗಿತ್ತಾದರೂ, ಮತ್ತೆ ತಡವಾಗಿದೆ. ಆಗಸ್ಟ್ 11, 2022ರಂದು ಅಮೀರ್ ಖಾನ್ ನೂತನ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರ ತಂಡ ಘೋಷಿಸಿದೆ.

ಲಾಲ್ ಸಿಂಗ್ ಛಡ್ಡಾ ಚಿತ್ರೀಕರಣದ ಅವಧಿಯಲ್ಲಿ ಅಮೀರ್ ಖಾನ್ ಅವರು ಬಿದ್ದು ಗಾಯಮಾಡಿಕೊಂಡಿದ್ದರು ಎನ್ನುವ ಸಂಗತಿ ಈಗ ಬಹಿರಂಗವಾಗಿದೆ.

ಓಟದ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭ ಅಮೀರ್ ಖಾನ್ ಬಿದ್ದು ಮೊಣಕಾಲಿಗೆ ಗಾಯವಾಗಿತ್ತು. ಅದಾದ ನಂತರ ಚಿಕಿತ್ಸೆ ಪಡೆದು ಅವರು ಸುಧಾರಿಸಿಕೊಂಡಿದ್ದರು ಎಂದು ವರದಿಯಾಗಿದೆ.

ಸಿನಿಮಾದ ಟ್ರೈಲರ್ ಐಪಿಎಲ್ 2022 ಫೈನಲ್ ಪಂದ್ಯದ ಅವಧಿಯಲ್ಲಿ ಬಿಡುಗಡೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT