ಸೋಮವಾರ, ಸೆಪ್ಟೆಂಬರ್ 21, 2020
22 °C

ನಟ ಅಭಿಷೇಕ್‌ ಬಚ್ಚನ್‌ ಕೋವಿಡ್‌–19ನಿಂದ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್ ಕೋವಿಡ್‌–19 ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಈ ಬಗ್ಗೆ ಅವರೇ ಟ್ವೀಟ್‌ ಮೂಲಕ ಖಚಿತಪಡಿಸಿದ್ದಾರೆ.

ಕಳೆದ ಜುಲೈ 11ರಂದು ಅಭಿಷೇಕ್‌ಗೆ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿತ್ತು. ಅಪ್ಪ ಅಮಿತಾಭ್‌ ಬಚ್ಚನ್‌ ಜೊತೆಗೆ ಅವರು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಆಗಸ್ಟ್‌ 2ರಂದು ಅಮಿತಾಭ್‌ ಬಚ್ಚನ್‌ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

‘ನಾನು ಕೋವಿಡ್‌ –19 ಪರೀಕ್ಷೆಗೆ ಒಳಗಾಗಿದ್ದೆ. ಈಗ ಅದರ ಫಲಿತಾಂಶ ಬಂದಿದೆ. ಸಂಪೂರ್ಣ ಗುಣಮುಖನಾಗಿದ್ದೇನೆ. ಕೊರೊನಾ ವಿರುದ್ಧ ಜಯಗಳಿಸಿದ್ದೇನೆ. ನಾನು ಮತ್ತು ನನ್ನ ಕುಟುಂಬದ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾನು ಆಭಾರಿ. ನನ್ನ ಆರೋಗ್ಯದ ರಕ್ಷಣೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಆದರೆ, ಅವರು ಮನೆಗೆ ಮರಳಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: ಕೋವಿಡ್‌ನಿಂದ ಗುಣಮುಖರಾದ ನಟ ಅಮಿತಾಬ್‌ ಬಚ್ಚನ್‌ ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು