ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ | ರಾಮ ಮಂದಿರದಲ್ಲಿ ಅಮಿತಾಭ್ ಬಚ್ಚನ್ ಪ್ರಾರ್ಥನೆ

Published 9 ಫೆಬ್ರುವರಿ 2024, 14:35 IST
Last Updated 9 ಫೆಬ್ರುವರಿ 2024, 14:35 IST
ಅಕ್ಷರ ಗಾತ್ರ

ಅಯೋಧ್ಯೆ: ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರು ರಾಮ ಮಂದಿರಕ್ಕೆ ತೆರಳಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಬಂದ ಅವರು, ನೇರವಾಗಿ ದೇವಾಲಯಕ್ಕೆ ತೆರಳಿ ಭಗವಂತನ ದರ್ಶನ ಪಡೆದರು. ದೇವಾಲಯದ ಆವರಣದಲ್ಲೇ ಸುಮಾರು ಅರ್ಧ ತಾಸು ಇದ್ದ ಬಚ್ಚನ್‌, ಹೊರಗಿನಿಂದಲೂ ಮಂದಿರದ ವಿನ್ಯಾಸವನ್ನು ಕಣ್ತುಂಬಿಕೊಂಡರು.

ಬಳಿಕ ಫೈಜಾಬಾದ್‌ ನಗರದಲ್ಲಿರುವ ಅಯೋಧ್ಯೆಯ ಆಯುಕ್ತ ಗೌರವ್‌ ದಯಾಳ್‌ ಅವರ ಅಧಿಕೃತ ನಿವಾಸಕ್ಕೆ ಮಧ್ಯಾಹ್ನದ ಊಟಕ್ಕೆ ತೆರಳಿದರು. ಈ ವೇಳೆ ಅಯೋಧ್ಯೆ ಜಿಲ್ಲಾಧಿಕಾರಿ ನಿತೀಶ್‌ ಕುಮಾರ್‌, ಐಜಿಪಿ ಪ್ರವೀಣ್‌ ಕುಮಾರ್‌, ಎಸ್‌ಎಸ್‌ಪಿ ರಾಜ್‌ಕರಣ್‌ ನಯ್ಯಾರ್‌ ಮತ್ತು ಪೌರಾಯುಕ್ತ ವಿಶಾಲ್‌ ಸಿಂಗ್‌ ಮತ್ತು ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.

ಬಚ್ಚನ್‌ ಅವರು, ರಾಮ ಮಂದಿರದಲ್ಲಿ ಜನವರಿ 22ರಂದು ನಡೆದ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT