ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಿವುಡ್‌ ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

Published 10 ಜೂನ್ 2024, 10:23 IST
Last Updated 10 ಜೂನ್ 2024, 10:23 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್‘ ವೆಬ್‌ ಸರಣಿಯಲ್ಲಿ ನಟಿ ಕಾಜೋಲ್‌ ಜತೆ ಮಾಲಾಬಿಕಾ ದಾಸ್‌ ನಟಿಸಿದ್ದರು.

ನೂರ್ ಮಾಲಾಬಿಕಾ ಅಪಾರ್ಟ್‌ಮೆಂಟ್‌ನಿಂದ ದುರ್ವಾಸೆ ಬರುತ್ತಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಟಿಯ ಮೃತದೇಹ ನೇ‌ಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

31 ವರ್ಷದ ನೂರ್ ಮಾಲಾಬಿಕಾ ದಾಸ್ ಖಿನ್ನತೆಯಿಂದ ಬಳಲುತ್ತಿದ್ದರು. ಈ ಸಂಬಂಧ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಯಾವುದೇ ಡೆತ್‌ ನೋಟ್‌ ಪತ್ತೆಯಾಗಿಲ್ಲ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT