ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಬಾಲಿವುಡ್‌ ನಟಿ ನುಶ್ರತ್‌ ಭರುಚಾ

Published 8 ಅಕ್ಟೋಬರ್ 2023, 9:59 IST
Last Updated 8 ಅಕ್ಟೋಬರ್ 2023, 9:59 IST
ಅಕ್ಷರ ಗಾತ್ರ

ಮುಂಬೈ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿದ್ದ ಬಾಲಿವುಡ್‌ ನಟಿ ನುಶ್ರತ್‌ ಭರುಚಾ ಸುರಕ್ಷಿತವಾಗಿ ಭಾರತಕ್ಕೆ ಆಗಮಿಸಿದ್ದಾರೆ.  ಮುಂಬೈ ವಿಮಾನ ನಿಲ್ದಾಣಕ್ಕೆ ನುಶ್ರತ್‌ ಬಂದಿರುವ ದೃಶ್ಯಗಳನ್ನು ಪಿಟಿಐ ಹಂಚಿಕೊಂಡಿದೆ.

9ನೇ ಹೈಫಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ನುಶ್ರತ್‌ ಇಸ್ರೇಲ್‌ಗೆ ತೆರಳಿದ್ದು, ದುರದೃಷ್ಟವಶಾತ್ ಯುದ್ಧ ಪೀಡಿತ ನೆಲದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ’ ಎಂದು ಅವರ ತಂಡದ ಸದಸ್ಯರೊಬ್ಬರು ಹೇಳಿದ್ದರು.

‘ಮಧ್ಯಾಹ್ನ 12.30ರ ಹೊತ್ತಿಗೆ ನಾವು ಅವರನ್ನು ಸಂಪರ್ಕಿಸಿದೆವು. ನೆಳಮಾಳಿಗೆಯಲ್ಲಿ ರಕ್ಷಣೆ ಪಡೆದಿರುವುದಾಗಿ ತಿಳಿಸಿದ್ದರು. ಇದಾದ ಬಳಿಕ ಅವರನ್ನು ಸಂಪರ್ಕಿಸಲು ನಮಗೆ ಸಾಧ್ಯವಾಗಲಿಲ್ಲ. ನುಶ್ರತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದೂ ಸದಸ್ಯರು ಮಾಹಿತಿ ನೀಡಿದ್ದರು.

ನುಶ್ರತ್‌ ನಟನೆಯ ‘ಅಕೆಲ್ಲಿ’ ಚಿತ್ರ ಹೈಫಾ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT