ಶನಿವಾರ, ಮೇ 21, 2022
20 °C

ಶರ್ಟ್‌ಲೆಸ್ ಫೋಟೊ ಹಂಚಿಕೊಂಡ ಸಲ್ಮಾನ್ ಖಾನ್: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಸಲ್ಮಾನ್, ಸಿನಿಮಾ, ವರ್ಕೌಟ್, ಪ್ರವಾಸದಂತಹ ವಿಶೇಷ ಸಂದರ್ಭಗಳಲ್ಲಿ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.  

ಓದಿ... ಬ್ಯಾಕ್‌ಲೆಸ್ ಡ್ರೆಸ್‌ನಲ್ಲಿ ಪಾರ್ಟಿಗೆ ಎಂಟ್ರಿ: ಟ್ರೋಲ್‌ಗೆ ಗುರಿಯಾದ ಜಾಹ್ನವಿ!

ಇದೀಗ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ಸಂದರ್ಭದಲ್ಲಿ ತೆಗೆದ ಶರ್ಟ್‌ಲೆಸ್‌ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ‘ಹಸಿರು ಎಲೆಗಳು ಮುಖ್ಯ! @beingstrongglobal #BeingStrong’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೊ ಸಖತ್‌ ವೈರಲ್‌ ಆಗುತ್ತಿದೆ.

‘ಅದ್ಭುತವಾಗಿ ಕಾಣುವಿರಿ’, ‘ಟೈಗರ್ ಈಸ್ ಬ್ಯಾಕ್’ ಎಂದೆಲ್ಲಾ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. 

ಓದಿ... ವಿಡಿಯೊ: ಅಂಗವಿಕಲ ಮುಸ್ಲಿಂ ಸಹಪಾಠಿಗೆ ನೆರವಾದ ಹಿಂದೂ ಸ್ನೇಹಿತೆಯರು, ಮೆಚ್ಚುಗೆ

ಸಲ್ಮಾನ್ ಖಾನ್, ಫೆಬ್ರುವರಿಯಲ್ಲಿ ಶರ್ಟ್‌ಲೆಸ್ ಫೋಟೊವೊಂದನ್ನು ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಈ ಫೋಟೊವನ್ನು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದರು. 

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಅವರೊಂದಿಗೆ ‘ಟೈಗರ್ 3’ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರ 2023ರ ಏಪ್ರಿಲ್ 21ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಾಣಲಿದೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅಭಿನಯ ‘ಗಾಡ್‌ಫಾದರ್‌’ ಚಿತ್ರದಲ್ಲಿ ಸಲ್ಮಾನ್ ಕಾಣಿಸಿಕೊಳ್ಳುತ್ತಿದ್ದಾರೆ. 

ಓದಿ... ಜನ ಏನಾದರೂ ಮಾತಾಡ್ತಾರೆ.. ಸುಪ್ರಿಯಾ ಜತೆಗಿನ ಸಂಭಾಷಣೆ ಬಗ್ಗೆ ತರೂರ್ ಹೇಳಿದ್ದೇನು? 

ಓದಿ...  40ನೇ ವಸಂತಕ್ಕೆ ಕಾಲಿಟ್ಟ ಅಲ್ಲು ಅರ್ಜುನ್‌: ರಶ್ಮಿಕಾ ಸೇರಿ ಗಣ್ಯರಿಂದ ಶುಭ ಹಾರೈಕೆ  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು