ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಭೇಟಿಯಾಗಿದ್ದಾರೆ.

ಇಬ್ಬರು ಭೇಟಿಯಾಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಮೋದ್ ಸಾವಂತ್ ಹಂಚಿಕೊಂಡಿದ್ದಾರೆ.

ನಗರದಲ್ಲಿರುವ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಸವಂತ್– ಸಲ್ಮಾನ್ ಭೇಟಿ ಮಾಡಿದ್ದಾರೆ. ‘ಬಾಲಿವುಡ್ ಮೆಗಾಸ್ಟಾರ್ ಅವರನ್ನು ಭೇಟಿ ಮಾಡಿದ್ದು ಬಹಳ ಸಂತೋಷವಾಯಿತು ಎಂದು ಸಾವಂತ್ ಹೇಳಿದ್ದಾರೆ‘

ಗೋವಾದಲ್ಲಿ ನವೆಂಬರ್ 20ರಿಂದ ಆರಂಭವಾಗಿರುವ 54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟ ಸಲ್ಮಾನ್ ಖಾನ್ ಅವರು ಮಂಗಳವಾರ ಭಾಗಿಯಾಗಿದ್ದರು. ನಂತರ ಸಲ್ಮಾನ್ ಖಾನ್ ಅವರು ಸಾವಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭವಾಗಿದ್ದು, 9 ದಿನ ಚಲನಚಿತ್ರೋತ್ಸವ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.