ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಡ ವಿವಿ: ಯುವತಿಯರ ಖಾಸಗಿ ವಿಡಿಯೊ ಹಂಚಬೇಡಿ ಎಂದು ಮನವಿ ಮಾಡಿದ ನಟ ಸೋನು ಸೂದ್

Last Updated 18 ಸೆಪ್ಟೆಂಬರ್ 2022, 10:30 IST
ಅಕ್ಷರ ಗಾತ್ರ

ಚಂಡೀಗಡ: ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸೋನು ಸೂದ್ ಜನಕ್ಕೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ.

‘ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ಯಾವುದೇ ವಿಡಿಯೊಗಳನ್ನು ವಾಟ್ಸ್‌ಆ್ಯಪ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಬೇಡಿ‘ ಎಂದು ಸೋನು ಮನವಿ ಮಾಡಿಕೊಂಡಿದ್ದಾರೆ.

‘ಚಂಡೀಗಡ ವಿಶ್ವವಿದ್ಯಾಲಯದಲ್ಲಿ ನಡೆದಿರುವುದು ತುಂಬಾದುರದೃಷ್ಟಕರ. ಈ ಸಮಯದಲ್ಲಿ ನಾವು ನಮ್ಮ ಸಹೋದರಿಯರೊಂದಿಗೆ ನಿಲ್ಲಬೇಕು. ಇದು ಸಮಾಜಕ್ಕೆ ಮಾದರಿಯಾಗಬೇಕಾದ ಸಮಯ, ನಮಗೆ ಪರೀಕ್ಷಾ ಸಮಯವೂ ಹೌದು. ಸಹೋದರಿಯರಿಗೆ ಸಂಬಂಧಿಸಿದ ಯಾವುದೇ ವಿಡಿಯೊಗಳನ್ನು ಎಲ್ಲಿಯೂ ಶೇರ್ ಮಾಡಬೇಡಿ.ಜವಾಬ್ದಾರಿಯುತವಾಗಿರಿ‘ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿರುವುದರಿಂದ ಹೇಳಿಕೆ ನೀಡಿರುವ ಮೋಹಾಲಿ ಪೊಲೀಸರು, ವಿದ್ಯಾರ್ಥಿನಿಯೊಬ್ಬಳು ತನ್ನ ಖಾಸಗಿ ವಿಡಿಯೊಗಳನ್ನು ತನ್ನ ಪ್ರಿಯಕರನಿಗೆ ಕಳುಹಿಸಿದ್ದಳು. ಈ ವಿಡಿಯೊ ಒಂದು ಮಾತ್ರ ಸೋರಿಕೆ ಆಗಿದೆ. ಆದರೆ, 60 ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಡಿಯೊಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

‘ಘಟನೆಗೆ ಬಂಧಿತ ಯುವತಿಯ ಒಂದು ವಿಡಿಯೊ ಇಷ್ಟೆಲ್ಲಾ ಬೆಳವಣಿಗೆಗೆ ಕಾರಣವಾಗಿದೆ. ಬೇರೆ ಯಾವುದೇ ಯುವತಿಗೆ ಸಂಬಂಧಿಸಿದ ವಿಡಿಯೊ ಪ್ರಾಥಮಿಕ ತನಿಖೆಯಲ್ಲಿ ಪೊಲೀಸರಿಗೆ ದೊರಕಿಲ್ಲ. ವಿದ್ಯಾರ್ಥಿನಿಯರು ಆತಂಕ ಪಡುವ ಅವಶ್ಯಕತೆ ಇಲ್ಲ’ ಎಂದು ಮೋಹಾಲಿ ಎಸ್‌ಪಿ ವಿವೇಕ್ ಸೋನಿ ತಿಳಿಸಿದ್ದಾರೆ.

‘ಬಂಧಿತ ಯುವತಿ ತನ್ನ ಪ್ರಿಯಕರನಿಗೆ ಕಳಿಸಲುಬಾತ್‌ರೂಮ್‌ನಲ್ಲಿ ತನ್ನ ಖಾಸಗಿ ವಿಡಿಯೊವನ್ನು ಶೂಟ್ ಮಾಡುವಾಗ ಅದನ್ನು ಇತರ ಕೆಲ ವಿದ್ಯಾರ್ಥಿನಿಯರು ನೋಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಯುವತಿಯೇ ದ್ವೇಷದಿಂದ ಈ ರೀತಿ ವಿಡಿಯೊಗಳನ್ನು ತನ್ನ ಪ್ರಿಯಕರನ ಜೊತೆ ಸೇರಿಕೊಂಡು ವೈರಲ್ ಮಾಡಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಖಂಡಿಸಿ ಪಂಜಾಬ್‌ನ ಮೊಹಾಲಿಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT