ನವದೆಹಲಿ: ತಮ್ಮ ವಸತಿ ಕಟ್ಟಡ ವಿವಾದಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಬಾಲಿವುಡ್ ನಟ ಸೋನು ಸೂದ್ ಮೇಲ್ಮನವಿಯನ್ನು ಹಿಂಪಡೆದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆನೇತೃತ್ವದ ತ್ರಿ ಸದಸ್ಯ ಪೀಠ ಸೂದ್ ತಮ್ಮ ಅರ್ಜಿ ಹಿಂಪಡೆಯಲು ಅನುವು ಮಾಡಿಕೊಟ್ಟಿದೆ.

ಜುಹೂ ಪ್ರದೇಶದಲ್ಲಿ ವಸತಿ ಕಟ್ಟಡವೊಂದನ್ನು ಅನುಮತಿ ಪಡೆಯದೆ ಹೋಟೆಲ್ ಆಗಿ ಪರಿವರ್ತಿಸಿದ ಆರೋಪದಡಿ ಬೃಹತ್ ಮುಂಬೈ ಮಹಾನಗರ ಪಾಲಿಕೆಯು (ಬಿಎಂಸಿ) ಸೂದ್ ಅವರಿಗೆ ನೋಟಿಸ್ ಕಳುಹಿಸಿತ್ತು. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಅವರು ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಆದರೆ ಬಾಂಬೆ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದರು.

ಇದನ್ನೂ ಓದಿ:ಅನುಮತಿ ಪಡೆಯದೆ ಹೋಟೆಲ್ ನಿರ್ಮಾಣ ಆರೋಪ: ಸುಪ್ರೀಂ ಕೋರ್ಟ್ ಮೊರೆ ಹೋದ ಸೋನು ಸೂದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.