ಭಾನುವಾರ, ಜನವರಿ 23, 2022
24 °C

36ನೇ ವಸಂತಕ್ಕೆ ಕಾಲಿಟ್ಟ ನಟಿ ದೀಪಿಕಾ ಪಡುಕೋಣೆ: ಅಭಿಮಾನಿಗಳಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು ಇಂದು (ಬುಧವಾರ) 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದೀಪಿಕಾ ಹುಟ್ಟುಹಬ್ಬದ ಅಂಗವಾಗಿ ಬಾಲಿವುಡ್‌ನ ನಟ– ನಟಿಯರು ಸೇರಿದಂತೆ ಅನೇಕ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.

‘ಚೆನ್ನೈ ಎಕ್ಸ್‌ಪ್ರೆಸ್‌’, ‘ರೇಸ್‌ –2’, ‘ಪೀಕು’, ‘ಬಾಜಿರಾವ್ ಮಸ್ತಾನಿ’, ‘ಪದ್ಮಾವತ್’, ‘ಝೀರೊ’, ‘ಛಪಾಕ್’, ‘83’ ನಂತಹ ಸೂಪರ್‌ಹಿಟ್‌ ಚಿತ್ರಗಳಲ್ಲಿ ದೀಪಿಕಾ ನಟಿಸಿದ್ದಾರೆ.

ಸದ್ಯ ದೀಪಿಕಾ, ‘ಗೆಹರಾಯಿಯಾ’, ‘ಸರ್ಕಸ್’, ‘ಪಠಾಣ್​’, ‘ಪ್ರಾಜೆಕ್ಟ್‌ ಕೆ’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

2018ರ ನವೆಂಬರ್‌ 14ರಂದು ರಣವೀರ್‌ ಸಿಂಗ್‌ ಅವರೊಂದಿಗೆ ಮದುವೆಯಾಗಿರುವ ದೀಪಿಕಾ, ಮುಂಬೈನಲ್ಲಿ ವಾಸವಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು