ಬುಧವಾರ, ಡಿಸೆಂಬರ್ 8, 2021
24 °C

ಮತ್ತೊಂದು ಹಾಟ್ ಫೋಟೊ: ಬಿಸಿಲಿಗೆ ನಶೆ ಏರಿಸಿದ ದಿಶಾ ಪಟಾನಿ!

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಟರ್ನೆಟ್‌ನಲ್ಲಿ ತಮ್ಮ ಮಾದಕ ಭಂಗಿಗಳ ಮೂಲಕ ನಟಿ ದಿಶಾ ಪಟಾನಿ ನೋಡುಗರ ಎದೆಯಲ್ಲಿ ಕಿಚ್ಚು ಹಬ್ಬಿಸುವ ಕಲೆಯನ್ನು ಚೆನ್ನಾಗಿಯೇ ಕರಗತ ಮಾಡಿಕೊಂಡಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಎಂದರೆ ಇಂದು (ಬುಧವಾರ) ದಿಶಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರ.

ದಿಶಾ ಅವರು ಮಾಲ್ಡೀವ್ಸ್ ಪ್ರವಾಸದ ಫೋಟೊವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಬಿಕಿನಿ ಧರಿಸಿ ದಿಶಾ ಕೊಟ್ಟಿರುವ ಭಾವಭಂಗಿಗಳು ನೋಡುಗರನ್ನು ಕ್ಷಣಕಾಲ ಹಿಡಿದು ನಿಲ್ಲಿಸುವಂತಿವೆ. ಸದ್ಯ ಈ ಫೋಟೊ ಇಂಟರ್‌ನೆಟ್‌ನಲ್ಲಿ ಟ್ರೆಂಡ್‌ ಆಗಿದೆ.

ಇತ್ತೀಚಿಗೆ ದಿಶಾಳ ಹೆಸರು ನಟ ಟೈಗರ್ ಶ್ರಾಫ್ ಜತೆಗೆ ಕೇಳಿಬಂದಿತ್ತು. ಇಬ್ಬರೂ ಜತೆಯಾಗಿ ಮಾಲ್ಡೀವ್ಸ್‌ನ ಬೀಚ್‌ಗಳಲ್ಲಿ ಕಾಲ ಕಳೆದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಇದನ್ನೂ ಓದಿ... ಜಿಮ್‌ನಲ್ಲಿ ವರ್ಕೌಟ್‌: ಅಭಿಮಾನಿಗಳಿಗೆ ಫಿಟ್ನೆಸ್ ಮಂತ್ರ ವಿವರಿಸಿದ ಗೀತಾ ಭಟ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು