ಬುಧವಾರ, ಆಗಸ್ಟ್ 4, 2021
27 °C

ಇಂದಿರಾ ಜೀವನಚರಿತ್ರೆ ಆಧಾರಿತ ‘ಎಮರ್ಜೆನ್ಸಿ’ ನಿರ್ದೇಶಿಸಲು ಕಂಗನಾ ರನೌತ್ ಸಜ್ಜು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Kangana Ranaut

ಬೆಂಗಳೂರು: ಬಾಲಿವುಡ್‌ನಲ್ಲಿ ಇತ್ತೀಚೆಗೆ ಹೆಚ್ಚು ವಿವಾದಗಳಿಂದ ಸುದ್ದಿಯಾಗಿರುವ ನಟಿ ಕಂಗನಾ ರನೌತ್ ಮತ್ತೊಂದು ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ.

ಕಂಗನಾ ರನೌತ್ ಈ ಬಗ್ಗೆ ತನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಮಣಿಕರ್ಣಿಕಾ ಚಿತ್ರದ ಬಳಿಕ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನ ಚರಿತ್ರೆ ಆಧಾರಿತ ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ಆ್ಯಕ್ಷನ್-ಕಟ್ ಹೇಳಲಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಕುರಿತಾದ ‘ತಲೈವಿ’ ಚಿತ್ರದಲ್ಲೂ ನಟಿಸುತ್ತಿರುವ ಕಂಗನಾ, ‘ಎಮರ್ಜೆನ್ಸಿ’ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ.

ಎಮರ್ಜೆನ್ಸಿ ಚಿತ್ರದ ಪಾತ್ರ ತಯಾರಿಗಾಗಿ ಕಂಗನಾ ಬಾಡಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದು, ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಕಿರು ವಿಡಿಯೊ ಒಂದನ್ನು ಕೂಡ ಹಂಚಿಕೊಂಡಿದ್ದರು.

ಕಂಗನಾ ರನೌತ್ ಮಣಿಕರ್ಣಿಕಾ ಫಿಲಂಸ್ ಬ್ಯಾನರ್ ಅಡಿಯಲ್ಲೇ ‘ಎಮರ್ಜೆನ್ಸಿ’ ಚಿತ್ರ ಸಿದ್ಧವಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು