ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಷ್ಣೇಶ್ವರ ಜ್ಯೋತಿರ್ಲಿಂಗ ದೇವಾಲಯದಲ್ಲಿ ಸಾರಾ ಅಲಿ ಖಾನ್ ವಿಶೇಷ ಪೂಜೆ

Published 24 ಜನವರಿ 2024, 16:14 IST
Last Updated 24 ಜನವರಿ 2024, 16:17 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಗೃಷ್ಣೇಶ್ವರ ಜ್ಯೋತಿರ್ಲಿಂಗಕ್ಕೆ ಮಂಗಳವಾರ ಭೇಟಿ ನೀಡಿದ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇಗುಲಕ್ಕೆ ಭೇಟಿ ನೀಡಿದ ಚಿತ್ರಗಳನ್ನು ಸಾರಾ ಅಲಿ ಖಾನ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

‘ಜೈ ಬೋಲೇನಾಥ್‌’ ಎಂದು ಬರೆದುಕೊಂಡಿರುವ ಸಾರಾ, ದೇಗುಲದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದು ಹಾಗೂ ನಂದಿಯ ಕಿವಿಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಚಿತ್ರಗಳು ಇವೆ.

ಸಾರಾ ಅವರು ಸದ್ಯ ಅನುರಾಗ್ ಬಸು ಅವರ ‘ಮೆಟ್ರೊ ಇನ್ ಡಿನೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆದಿತ್ಯ ರಾಯ್ ಕಪೂರ್, ಕೊಂಕನ್ ಸೇನ್ ಶರ್ಮಾ, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್, ಅನುಪಮ್ ಖೇರ್, ಅಲಿ ಫಝಲ್‌ ಹಾಗೂ ನೀನಾ ಗುಪ್ತಾ ಮುಖ್ಯ ಪಾತ್ರದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT