ಸೋಮವಾರ, ಜುಲೈ 4, 2022
21 °C

ಸುಹಾನಾ ಖಾನ್ ಹಂಚಿಕೊಂಡ ಹಾಟ್ ಚಿತ್ರಕ್ಕೆ ಫ್ಯಾನ್ಸ್ ಫಿದಾ!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬಾಲಿವುಡ್ ನಟ ಶಾರುಖ್ ಖಾನ್‌ ಅವರ ಮುದ್ದಿನ ಮಗಳು ಸುಹಾನಾ ಖಾನ್‌ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಟ್ ಚಿತ್ರವೊಂದನ್ನು ಪೋಸ್ಟ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕಪ್ಪು ಬಣ್ಣದ ಬ್ಯಾಕ್‌ಲೆಸ್ ಗೌನ್‌ ತೊಟ್ಟಿರುವ ಸುಹಾನ, ಕ್ಯಾಮೆರಾಗೆ ಬೆನ್ನು ತೋರಿ ಬೇರೊಂದು ದಿಕ್ಕಿಗೆ ಮುಖ ತಿರುಗಿಸಿರುವ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರೀಸ್‌ನಲ್ಲಿ ಹಾಕಿಕೊಂಡಿದ್ದಾರೆ. ಈ ಚಿತ್ರ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸುಹಾನ, 'ದಿ ಆರ್ಚೀಸ್‌' ಕಾಮಿಕ್ ಸರಣಿಯ ಹಿಂದಿ ಅವತರಣಿಕೆಯಲ್ಲಿ ಬಣ್ಣ ಹಚ್ಚುವ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಜೋಯಾ ಅಖ್ತರ್‌ ನಿರ್ದೇಶನದ ಈ ಚಿತ್ರದಲ್ಲಿ, ಸುಹಾನ ಜೊತೆಗೆ ಖುಷಿ ಕಪೂರ್‌, ಅಗಸ್ತ್ಯ ನಂದ ಅವರೂ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸುಹಾನಾ ಅವರನ್ನು ಇನ್‌ಸ್ಟಾಗ್ರಾಂನಲ್ಲಿ 25 ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ.


ಸುಹಾನಾ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಹಾಕಿಕೊಂಡಿರುವ ಚಿತ್ರ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು