ಮುಂಬೈ; ಬಾಲಿವುಡ್ ನಟಿ ಜರೀನಾ ಖಾನ್ ಡೆಂಗಿ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಜರೀನಾ ಖಾನ್, ಡೆಂಗಿ ಜ್ವರವು ಸೊಳ್ಳೆಗಳಿಂದ ಹರಡುವ ಕಾಯಿಲೆಯಾಗಿದ್ದು, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು, ರಕ್ಷಣಾತ್ಮಕ ಕ್ರಮಗಳನ್ನು ಅನುಸರಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರಿಂದ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಬರೆದುಕೊಂಡಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಡೆಂಗಿ ಪ್ರಕರಣಗಳ ಹೆಚ್ಚಾಗುತ್ತಿದೆ.
ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ, ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ರೋಗ ಲಕ್ಷಣಗಳಾಗಿವೆ.