ಗುರುವಾರ , ಏಪ್ರಿಲ್ 2, 2020
19 °C

‘ಬ್ರಹ್ಮಾಸ್ತ್ರ’ ಪ್ರಯೋಗ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಣವೀರ್ ಕ‍ಪೂರ್ ಮತ್ತು ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ’ ಚಿತ್ರದ ಬಿಡುಗಡೆಯು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಚಿತ್ರವನ್ನು ಡಿಸೆಂಬರ್‌ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಹೇಳಲಾಗಿತ್ತು.

ಆದರೆ, ಈಗ ಈ ಚಿತ್ರದ ಚಿತ್ರೀಕರಣದ ಕೆಲಸಗಳು ಮುಂದಕ್ಕೆ ಹೋಗಿವೆ ಎನ್ನುವ ಸುದ್ದಿ ಬಂದಿದೆ. ಚಿತ್ರೀಕರಣ ಮುಂದಕ್ಕೆ ಹೋಗಿರುವುದರ ಪರಿಣಾಮ ಎಂಬಂತೆ, ಚಿತ್ರದ ಬಿಡುಗಡೆ ಕೂಡ ಮುಂದಕ್ಕೆ ಹೋಗಲಿದೆ ಎಂದು ಹೇಳಲಾಗಿದೆ.

ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಅಕ್ಕಿನೇನಿ ನಾಗಾರ್ಜುನ ಕೂಡ ಅಭಿನಯಿಸುತ್ತಿದ್ದಾರೆ. ಇದು ಮೂರು ಸಿನಿಮಾಗಳ ಸರಣಿಯಲ್ಲಿ ಮೊದಲ ಸಿನಿಮಾ. ಸೂಪರ್‌ಹೀರೊ ಕಥೆಯನ್ನು ಹೊಂದಿರುವ ಈ ಸಿನಿಮಾವನ್ನು ಅಯಾನ್ ಮುಖರ್ಜಿ ನಿರ್ದೇಶಿಸುತ್ತಿದ್ದಾರೆ.

ಫಾಕ್ಸ್ ಸ್ಟಾರ್ ಸ್ಟುಡಿಯೊಸ್ ಮತ್ತು ಧರ್ಮ ಪ್ರೊಡಕ್ಷನ್ಸ್‌ ಸಂಸ್ಥೆಗಳು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು