ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಐಶ್ವರ್ಯಾ ರೈ -ಅಭಿಷೇಕ್ ಬಚ್ಚನ್ ಜೋಡಿ

Last Updated 20 ಏಪ್ರಿಲ್ 2022, 9:49 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಅಭಿಷೇಕ್ ಬಚ್ಚನ್ –ಐಶ್ವರ್ಯಾ ರೈ ದಂಪತಿ ಇಂದು (ಬುಧವಾರ) 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

ಈ ಜೋಡಿ 2007ರ ಏಪ್ರಿಲ್ 20ರಂದು ಸಪ್ತಪದಿ ತುಳಿದಿತ್ತು. ಇವರಿಗೆ ಆರಾಧ್ಯಾ ಎಂಬ ಮಗಳಿದ್ದಾಳೆ.

ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ತಾರಾ ದಂಪತಿಗೆ ತಮ್ಮದೇ ಆದ ಅಭಿಮಾನಿ ಬಳಗವಿದೆ. ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಕುಚ್‌ ನಾ ಕಹೋ’, ‘ಗುರು’, ‘ಧೂಮ್ 2’, ‘ರಾವನ್’, ‘ಬಂಟಿ ಔರ್ ಬಬ್ಲಿ’, ‘ಗುಲಾಬ್ ಜಾಮೂನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಐಶ್ವರ್ಯಾ ಮತ್ತು ಅಭಿಷೇಕ್ ಒಟ್ಟಿಗೆ ಅಭಿನಯಿಸಿದ್ದಾರೆ.

ಸದ್ಯ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್’ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳಲಿದ್ದು, ಸೆ.30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಅಭಿಷೇಕ್ ಬಚ್ಚನ್, ‘ಘೂಮರ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT