ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್‌ ನಿರ್ದೇಶಕ ಮಧುರ್ ಭಂಡಾರ್ಕರ್ ಭೇಟಿ

Last Updated 23 ಜೂನ್ 2022, 11:11 IST
ಅಕ್ಷರ ಗಾತ್ರ

ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಮಧುರ್ ಭಂಡಾರ್ಕರ್ ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಮಧುರ್ ಭಂಡಾರ್ಕರ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣಕೂ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಇಂದು ಭೇಟಿ ನೀಡಿದೆ. ದೇವರ ದರ್ಶನ ತುಂಬಾ ಚೆನ್ನಾಗಿ ಆಯಿತು ಎಂದು ಬರೆದುಕೊಂಡಿದ್ದಾರೆ.

ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿರುವ ಮಧುರ್ ಭಂಡಾರ್ಕರ್ ಅವರು ಕ್ಯಾಲೆಂಡರ್ ಗರ್ಲ್ಸ್‌ (2015) ಹೀರೋಯಿನ್ (2012), ದಿಲ್ ತೋ ಬಚ್ಚಾ ಹೈ ಜಿ (2011), ಜೈಲ್ (2009), ಫ್ಯಾಶನ್ (2008) ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT