ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯೋಧಾ’ ಚಿತ್ರೀಕರಣದಲ್ಲಿ ಬ್ಯುಸಿಯಾದ ನಟಿ ರಾಶಿ ಖನ್ನಾ

Last Updated 5 ಜನವರಿ 2022, 9:55 IST
ಅಕ್ಷರ ಗಾತ್ರ

ಮುಂಬೈ: ‘ಯೋಧಾ' ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿರುವ ನಟಿ ರಾಶಿ ಖನ್ನಾ ಅವರು ಚಿತ್ರೀಕರಣದಲ್ಲಿ ಕಾಣಿಸಿಕೊಂಡಿದ್ದಾರೆ.

‘ಯೋಧಾ’ ಚಿತ್ರ ಧರ್ಮ ಪ್ರೊಡಕ್ಷನ್‌ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ದಿನ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಅವರು ಚಿತ್ರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಶಿ ತಮ್ಮ ಮುಂದಿನ ಚಿತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ನಟಿಸಲಿದ್ದಾರೆ. ಜತೆಗೆ, ನಟಿ ಅಜಯ್ ದೇವಗನ್ ಅವರೊಂದಿಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ತೆಲುಗಿನ ‘ಜೋರು’, ‘ಶಿವಂ’, ‘ಹೈಪರ್‌’, ‘ಜೈ ಲವ-ಕುಶ’, ‘ರಾಜಾ ದಿ ಗ್ರೇಟ್’, ‘ವಿಲನ್‌’, ‘ಶ್ರೀನಿವಾಸ ಕಲ್ಯಾಣಂ’ ಸೇರಿದಂತೆ ತಮಿಳಿನ ಹಲವು ಚಿತ್ರಗಳಲ್ಲಿ ರಾಶಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT