ಮಂಗಳವಾರ, ಡಿಸೆಂಬರ್ 7, 2021
23 °C

ನಟಿ ಶೆರ್ಲಿನ್‌ ಚೋಪ್ರಾ ವಿರುದ್ಧ ₹50ಕೋಟಿ ಮಾನನಷ್ಟ ಕೇಸ್ ಹಾಕಿದ ಶಿಲ್ಪಾ ಶೆಟ್ಟಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್‌ ಕುಂದ್ರಾ ಅವರು ನಟಿ ಶೆರ್ಲಿನ್‌ ಚೋಪ್ರಾ ಅವರಿಗೆ ₹ 50 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್‌ ಕಳುಹಿಸಿದ್ದಾರೆ.

ಸುಳ್ಳು ಮತ್ತು ಆಧಾರ ರಹಿತ ಆರೋಪ ಮಾಡುವ ಮೂಲಕ ತಮ್ಮ ಪ್ರತಿಷ್ಠೆಗೆ ಚ್ಯುತಿ ಉಂಟು ಮಾಡಿರುವ ಶೆರ್ಲಿನ್‌ ಅವರು ಕ್ಷಮೆ ಕೇಳಬೇಕು ಎಂದು ಶಿಲ್ಪಾ ಶೆಟ್ಟಿ ದಂಪತಿ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಏಳು ದಿನಗಳೊಳಗೆ ಪ್ರಮುಖ ಪತ್ರಿಕೆ ಮತ್ತು ಡಿಜಿಟಲ್‌ ಮಾಧ್ಯಮಗಳ ಮೂಲಕ ಶೆರ್ಲಿನ್‌ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಶೆರ್ಲಿನ್‌ ಹಣ ವಸೂಲಿ ಮಾಡುವ ಉದ್ದೇಶದಿಂದ ಆರೋಪ ಮಾಡಿದ್ದು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕ್ಷಮೆ ಕೇಳದಿದ್ದರೆ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶಿಲ್ಪಾ ಶೆಟ್ಟಿ ದಂಪತಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ದೂರು ನೀಡಿದ ನಟಿ ಶೆರ್ಲಿನ್ ಚೋಪ್ರಾ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು