ಶನಿವಾರ, ಮೇ 15, 2021
25 °C

ಬಾಲಿವುಡ್ ನಟ ಅಮೀರ್ ಖಾನ್‌ಗೆ ಕೋವಿಡ್ ಪಾಸಿಟಿವ್

ಪಿಟಿಐ‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ಸೂಪರ್ ಸ್ಟಾರ್ ನಟ ಅಮೀರ್ ಖಾನ್ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಸದ್ಯ ಆರಾಮವಾಗಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ.

56 ವರ್ಷದ ನಟ ಕ್ಷೇಮವಾಗಿದ್ದು, ಅವರ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗುವಂತೆ ಅಮೀರ್ ಖಾನ್ ವಕ್ತಾರರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಅಮೀರ್ ಖಾನ್ ಜೊತೆಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ನಡೆಸಿಕೊಳ್ಳಬೇಕು. ನಿಮ್ಮೆಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಉಲ್ಲೇಖಿಸಲಾಗಿದೆ.

 

 

 

ಕುತೂಹಲದಾಯಕ ಸಂಗತಿಯೆಂದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಎರಡು ದಿನಗಳ ಬಳಿಕ ಅಮೀರ್ ಖಾನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

 

ಸೋಮವಾರ ವಿಶ್ವ ಜಲ ದಿನಾಚರಣೆಯಂದು ಠಾಕ್ರೆ ಜೊತೆಗೆ ಅಮೀರ್ ಖಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಅಮೀರ್‌ ನಟನೆಯ ಲಾಲ್‌ ಸಿಂಗ್‌ ಚಡ್ಡಾ ಚಿತ್ರದ ಫಸ್ಟ್‌ ಲುಕ್‌ಗೆ ಪ್ರಶಂಸೆಯ ಸುರಿಮಳೆ

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟರಲ್ಲಿ ಓರ್ವರಾಗಿರುವ ಅಮೀರ್ ಖಾನ್ ಅಭಿನಯದ 'ಲಾಲ್ ಸಿಂಗ್ ಚಡ್ಡಾ' ವರ್ಷಾಂತ್ಯದಲ್ಲಿ ಡಿಸೆಂಬರ್ ವೇಳೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಮಿಸ್ಟರ್ ಪರ್ಫೆಕ್ಷನಿಸ್ಟ್ ಖ್ಯಾತಿಯ ನಟ ಅಮೀರ್ ಖಾನ್ ಸೋಷಿಯಲ್ ಮೀಡಿಯಾಗಳಿಗೆ ಗುಡ್ ಬೈ ಹೇಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು