ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್‌ ಮುಗಿಸಿದ ‘ಬಾಂಡ್‌ ರವಿ’

Last Updated 14 ಜೂನ್ 2022, 7:02 IST
ಅಕ್ಷರ ಗಾತ್ರ

ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ‘ಬಾಂಡ್ ರವಿ’ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಶೂಟಿಂಗ್ ಮುಗಿಸಿರುವ ‘ಬಾಂಡ್ ರವಿ’ ತಂಡ ಇತ್ತೀಚೆಗೆ ಕುಂಬಳಕಾಯಿ ಒಡೆದಿದೆ.

ಹನ್ನೊಂದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಎಸ್.ಪಿ. ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಾಂಡ್ ರವಿ ಆ್ಯಕ್ಷನ್‌ ಲವ್ ಸ್ಟೋರಿ ಸಿನಿಮಾ. ಈ ಹಿಂದೆ ಮಾದ ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದ ನರಸಿಂಹಮೂರ್ತಿ ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್‌ನ ಅಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಈ ಚಿತ್ರದ ಸಹ ನಿರ್ಮಾಪಕರು.

ಕಾಜಲ್ ಕುಂದರ್ ಪ್ರಮೋದ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ. ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT