ನಟ ಪ್ರಮೋದ್ ಅಭಿನಯದ ‘ಬಾಂಡ್ ರವಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಮೋದ್ ಖಡಕ್ ನಟನೆ ಎಲ್ಲರ ಗಮನ ಸೆಳೆಯುತ್ತಿದೆ. ಟೀಸರನ್ನು ಪತ್ರಕರ್ತರು ಇತ್ತೀಚೆಗೆ ಬಿಡುಗಡೆ ಮಾಡಿದರು.

‘ಗೀತಾ ಬ್ಯಾಂಗಲ್ ಸ್ಟೋರ್' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ನಾಯಕ ನಟನಾಗಿ ಬಂದಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಪ್ರಮೋದ್ ಮಾತನಾಡಿ, ‘ನಾನು ಈ ಸಿನಿಮಾವನ್ನು ತುಂಬಾ ಇಷ್ಟಪಟ್ಟು ಮಾಡಿದ್ದೇನೆ. ಈ ಸಿನಿಮಾ ಗೆದ್ದೇ ಗೆಲ್ಲುತ್ತೆ ಅನ್ನೋ ಬಲವಾದ ನಂಬಿಕೆ ಕೂಡ ನನಗಿದೆ. ಅಷ್ಟು ಒಳ್ಳೆಯ ಕಂಟೆಂಟ್, ಕಥೆ ಸಿನಿಮಾದಲ್ಲಿದೆ. ನಾನು ಕೂಡ ಈ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತೇನೆ’ ಎಂದು ಭರವಸೆಯ ಮಾತುಗಳನ್ನಾಡಿದರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ‘ನನಗೂ ಈ ಸಿನಿಮಾ ಬಗ್ಗೆ ಅಪಾರ ಭರವಸೆ ಇದೆ. ಪ್ರಮೋದ್ ಮತ್ತು ಕಾಜಲ್ ಕುಂದರ್ ಇಬ್ಬರು ಅಮೋಘವಾಗಿ ನಟಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದ ನಟಿ ಕಾಜಲ್ ಕುಂದರ್ ಮಾತನಾಡಿ, ‘ನನ್ನ ಮೇಲೆ ನಂಬಿಕೆ ಇಟ್ಟು ಒಳ್ಳೆಯ ಪಾತ್ರವನ್ನು ಕೊಟ್ಟಿದ್ದಾರೆ. ನನ್ನ ಪಾತ್ರಕ್ಕೆ ನ್ಯಾಯ ಒದಗಿಸಿದ್ದೇನೆ ಎಂಬ ನಂಬಿಕೆ ಇದೆ. ಪ್ರಮೋದ್ ಅವರ ಜೊತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ’ ಎಂದರು.

ಚಿತ್ರದ ನಿರ್ದೇಶಕ ಪ್ರಜ್ಚಲ್ ಮಾತನಾಡಿ, ‘ಇದು ನನ್ನ ಮೊದಲ ಸಿನಿಮಾ. ಸಿನಿಮಾ ಚೆನ್ನಾಗಿ ಮೂಡಿ ಮುಂದಿದೆ. ಒಂದೊಳ್ಳೆ ಸಿನಿಮಾ ಮಾಡಿದ ತೃಪ್ತಿ ನನಗಿದೆ. ನವೆಂಬರ್ನಲ್ಲಿ ಈ ಸಿನಿಮಾ ಬಿಡುಗಡೆಗೆ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು

ನರಸಿಂಹಮೂರ್ತಿ ಅವರು ಲೈಫ್ ಲೈನ್ ಫಿಲಂ ಬ್ಯಾನರ್ ಅಡಿ ಬಾಂಡ್ ರವಿ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫೆರ್ನಾಂಡಿಸ್ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚಿತ್ರದಲ್ಲಿ ಅಪ್ಪು ಅಭಿಮಾನಿಯಾಗಿ ಪ್ರಮೋದ್ ನಟಿಸಿದ್ದಾರೆ.

ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ, ಮಂಗಳೂರು ಭಾಗಗಳಲ್ಲಿ ಬಾಂಡ್ ರವಿ ಚಿತ್ರೀಕರಣ ನಡೆಸಲಾಗಿದೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಚಿತ್ರಕ್ಕಿದೆ.

ಟೀಸರ್

https://youtu.be/XLQ-mePIKRo

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.