ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಯ್ಡಾ ಬಳಿ ಫಿಲ್ಮ್ ಸಿಟಿ ನಿರ್ಮಾಣದ ಹೊಣೆ ನಿರ್ಮಾಪಕ ಬೋನಿ ಕಪೂರ್ ಕಂಪನಿಗೆ

ಉತ್ತರ ಪ್ರದೇಶ ಸರ್ಕಾರದ ಮಹತ್ವಾಕಾಂಕ್ಷೆಯ ‘ಫಿಲ್ಮ್ ಸಿಟಿ’ ಯೋಜನೆ: ಒಂದು ಸಾವಿರ ಎಕರೆಯಲ್ಲಿ ತಲೆ ಎತ್ತಲಿದೆ ಫಿಲ್ಮ್ ಸಿಟಿ
Published 30 ಜನವರಿ 2024, 10:55 IST
Last Updated 30 ಜನವರಿ 2024, 10:55 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಮಹತ್ವಾಕಾಂಕ್ಷೆಯ ‘ಫಿಲ್ಮ್ ಸಿಟಿ’ ಯೋಜನೆ ಅನುಷ್ಠಾನದ ಹೊಣೆ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರ ಸಂಸ್ಥೆಗೆ ದಕ್ಕಿದೆ.

ರಿಯಲ್ ಎಸ್ಟೇಟ್ ಕಂಪನಿ ಭೂತಾನಿ ಗ್ರೂಪ್ ಸಹಯೋಗದೊಂದಿಗೆ ಬೋನಿ ಕಪೂರ್ ಅವರ Bayview Projects ಕಂಪನಿ ನೋಯ್ಡಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಗೆ ಹೊಂದಿಕೊಂಡಂತೆ ಇರುವ ಸ್ಥಳದಲ್ಲಿ ಜಾಗತಿಕ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

Yamuna Expressway Industrial Development Authority (YEIDA) ಮೇಲ್ವಿಚಾರಣೆಯಲ್ಲಿ ಫಿಲ್ಮ್ ಸಿಟಿ ಹಂತ ಹಂತವಾಗಿ ನಿರ್ಮಾಣವಾಗಲಿದೆ. ಮಂಗಳವಾರ ಫಿಲ್ಮ್ ಸಿಟಿ ನಿರ್ಮಾಣದ ಒಪ್ಪಂದಕ್ಕೆ ಸಹಿ ಬಿದ್ದಿದೆ.

ಸುಮಾರು 1,000 ಎಕರೆಯಲ್ಲಿ ಈ ಫಿಲ್ಮ್ ಸಿಟಿ ನಿರ್ಮಾಣವಾಗಲಿದ್ದು 230 ಎಕರೆಯಲ್ಲಿನ ಮೊದಲ ಹಂತದ ಯೋಜನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರವಾಸೋಧ್ಯಮ, ಮನರಂಜನಾ ಕ್ಷೇತ್ರದ ಬೆಳವಣಿಗೆ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಅವರ ಕನಸಿನ ಯೋಜನೆ ಇದಾಗಿದೆ ಎನ್ನಲಾಗಿದೆ.

ದಿವಂಗತ ನಟಿ ಶ್ರೀದೇವಿ ಅವರ ಪತಿಯೂ ಆಗಿರುವ ಬೋನಿ ಕಪೂರ್ ಅವರು ಮಿಸ್ಟರ್ ಇಂಡಿಯಾ ಸೇರಿದಂತೆ ಇದುವರೆಗೆ ಬಾಲಿವುಡ್, ತೆಲುಗು, ತಮಿಳಿನ 39 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಅವರ ಮಗಳು ಜಾಹ್ನವಿ ಕಪೂರ್ ಸಹ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT