ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬ್ರಹ್ಮಾಸ್ತ್ರ’ ಟ್ರೈಲರ್‌: ಪ್ರೀತಿ, ಬೆಳಕು, ಬೆಂಕಿಯ ಆಟದಲ್ಲಿ ಆಲಿಯಾ–ರಣಬೀರ್‌

Last Updated 15 ಜೂನ್ 2022, 12:31 IST
ಅಕ್ಷರ ಗಾತ್ರ

ಬೆಂಗಳೂರು: ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದ್ದು ಬಾಲಿವುಡ್‌ನಲ್ಲಿ ಭರವಸೆ ಮೂಡಿಸಿದೆ.

ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 12 ಲಕ್ಷ ವೀಕ್ಷಣೆ ಪಡೆದಿದೆ. ಪ್ರೀತಿ, ಬೆಳಕು, ಬೆಂಕಿ ಚಿತ್ರದ ಹೈಲೆಟ್‌ ಎಂದು ಚಿತ್ರತಂಡ ಹೇಳಿಕೊಂಡಿದೆ.ಈ ಚಿತ್ರದಲ್ಲಿ ಬಾಲಿವುಡ್‌ನ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯಿಸಿದ್ದಾರೆ.

ಕನ್ನಡ ಟ್ರೈಲರ್‌....

2018ರಲ್ಲಿ ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ಆರಂಭವಾಗಿದ್ದು, 2022ರಲ್ಲಿ ಮುಕ್ತಾಯವಾಯಿತು. ಐದು ವರ್ಷಗಳ ಕಾಲ ಈ ಸಿನಿಮಾದ ಶೂಟಿಂಗ್‌ ನಡೆದಿದೆ. ಇದೇಸೆಪ್ಟೆಂಬರ್‌ 9ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಇದು ಮೊದಲ ಭಾಗ ಎಂದು ಚಿತ್ರತಂಡ ಹೇಳಿದೆ.

ಬ್ರಹ್ಮಾಸ್ತ್ರ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT