‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ‘ಶಿವಾನಿ’ಯಾಗಿ ಮಿಂಚಿದ ಬೃಂದಾ, ಸಚಿನ್ ವಾಲಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ದಲ್ಲಿ ನಿರೂಪ್ ಭಂಡಾರಿಗೆ ಜೋಡಿಯಾಗಿದ್ದಾರೆ. ಈ ಚಿತ್ರದಲ್ಲಿ ನಟಿ ಅಂಕಿತಾ ಅಮರ್ ವರದಿಗಾರ್ತಿಯಾಗಿದ್ದಾರೆ. ಸಾಯಿಕುಮಾರ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಚಿನ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಸಿನಿಮಾ ಹಾಸ್ಯ ಹಾಗೂ ಸಾಂಸಾರಿಕ ಕಥಾವಸ್ತುವನ್ನು ಹೊಂದಿದೆ. ಸದ್ಯ ಬೃಂದಾ ಕೈಯಲ್ಲಿ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ, ‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್ ನಿರ್ದೇಶನದ ‘ಎಕ್ಸ್ ಆ್ಯಂಡ್ ವೈ’, ಎಸ್.ನಾರಾಯಣ್ ನಿರ್ದೇಶನದ ‘ಒಂದ್ಸಲ ಮೀಟ್ ಮಾಡೋಣ’ ಚಿತ್ರಗಳಿವೆ.