‘ದಂಡುಪಾಳ್ಯ’ ಸಿನಿಮಾ ನಿರ್ದೇಶಕ ಶ್ರೀನಿವಾಸರಾಜು ಅವರು ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಹತ್ತಿರವಾದವರು. ಅವರು ನಿರ್ದೇಶಿಸಿರುವ ‘ಬೃಂದಾವಿಹಾರಿ’ ಸಿನಿಮಾದ ‘ರಾಧಾ ರಾಧಾ’ ಹಾಡು ಇತ್ತೀಚೆಗೆ ತುಮಕೂರಿನಲ್ಲಿ ಬಿಡುಗಡೆಯಾಗಿದೆ.

ಚಿತ್ರರಂಗದಲ್ಲಿ ಎರಡು ದಶಕಗಳನ್ನು ಪೂರೈಸಿ ಹೆಜ್ಜೆ ಇಡುತ್ತಿರುವ ಗಣೇಶ್ ಈ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿದ್ದು, ಅವರಿಗೆ ದೇವಿಕಾ ಭಟ್ ಹಾಗೂ ಮಾಳವಿಕಾ ಶರ್ಮ ಜೋಡಿಯಾಗಿದ್ದಾರೆ. ‘ರಾಧಾ ರಾಧಾ’ ಚಿತ್ರದ ಎರಡನೇ ಹಾಡಾಗಿದ್ದು, ದೇವಿಕಾ ಭಟ್ ‘ರಾಧ’ ಆಗಿ ಹೆಜ್ಜೆ ಹಾಕಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಈ ಹಾಡಿಗೆ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ದನಿಯಾಗಿರುವ ಈ ಹಾಡಿನಲ್ಲಿ ಗಣೇಶ್ ಹಾಗೂ ದೇವಿಕಾ ಭಟ್ ಕಾಣಿಸಿಕೊಂಡಿದ್ದಾರೆ. ಮಾಳವಿಕಾ ಶರ್ಮ ಸಿನಿಮಾದಲ್ಲಿ ‘ಮೀರಾ’ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

‘ನನಗೂ ತುಮಕೂರಿಗೂ ಹತ್ತಿರದ ನಂಟಿದೆ. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ನಾನು ನಾಯಕನಾಗಿ ಇಪ್ಪತ್ತು ವರ್ಷಗಳಾಗಿವೆ. ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ವಿಶೇಷ ಧನ್ಯವಾದವನ್ನು ಉದಯ ಟಿವಿಗೆ ಹೇಳುತ್ತೇನೆ. ಅಲ್ಲಿನ ‘ಕಾಮಿಡಿ ಟೈಮ್’ ಕಾರ್ಯಕ್ರಮವೇ ನನ್ನನ್ನು ಚಿತ್ರರಂಗಕ್ಕೆ ಕರೆತಂದಿತ್ತು. ಈಗಾಗಲೇ ಬಿಡುಗಡೆಯಾಗಿರುವ ‘ಬೃಂದಾವಿಹಾರಿ’ಯ ಮೊದಲ ಹಾಡು ‘ರಾಮ ರಾಮ’ ಯಶಸ್ವಿಯಾಗಿದೆ’ ಎಂದರು ಗಣೇಶ್.

ಸಮೃದ್ಧಿ ವಿ. ಮಂಜುನಾಥ್ ನಿರ್ಮಾಣದ ಈ ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಎಲ್ಲಾ ಹಾಡುಗಳನ್ನು ವಿ.ನಾಗೇಂದ್ರ ಪ್ರಸಾದ್ ಅವರೇ ಬರೆದಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಕಥೆ, ಚಿತ್ರಕಥೆ ಬರೆದಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಚಿತ್ರಗ್ರಹಣ ಸಿನಿಮಾಗಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1905787848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.