ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ‘ಬುಲೆಟ್’ ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡವು. ಸತ್ಯಜಿತ್ ಶಬ್ಬೀರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ತೆಲುಗು, ತಮಿಳು, ಮಲೆಯಾಳ ಹಾಗೂ ಹಿಂದಿ ಭಾಷೆಗಳಲ್ಲಿ ಚಿತ್ರ ಸಿದ್ಧಗೊಂಡಿದೆ.

‘ನಾನು ಭಾರತಿರಾಜ ಅವರ ನಿರ್ದೇಶನದ ‘ಪದಿನಾರು ವಯದಿನಿಲೆ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಟನಾಗಿ ಚಿತ್ರರಂಗ ಪ್ರವೇಶಿಸಿದೆ. ಸಂಗೀತ ನಿರ್ದೇಶಕರಾದ ಇಳಯರಾಜ ಅವರು ಶಬ್ಬೀರ್ ಎಂದಿದ್ದ ನನ್ನ ಹೆಸರಿನ ಮುಂದೆ ಸತ್ಯಜಿತ್ ಎಂದು ಸೇರಿಸಿದರು. ಅಂದಿನಿಂದ ನನ್ನ ಹೆಸರು ಸತ್ಯಜಿತ್ ಶಬ್ಬೀರ್. ಈವರೆಗೂ ತೆಲುಗು, ತಮಿಳು, ಮಲಯಾಳ ಹಾಗೂ ಹಿಂದಿ ಭಾಷೆಗಳ 75 ಚಿತ್ರಗಳಲ್ಲಿ ನಟಿಸಿದ್ದೇನೆ. ಮೂಲತಃ ಕರ್ನಾಟಕದವನಾಗಿರುವ ನಾನು ಆನಂತರ ಚೆನ್ನೈ ಹಾಗೂ ಮುಂಬೈನಲ್ಲಿ ನೆಲೆಸಿದ್ದೆ. ಮೊದಲ ಚಿತ್ರವನ್ನು ಕನ್ನಡದಲ್ಲೇ ನಿರ್ಮಿಸಿ, ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಿದು. ಜೂನ್ 20ರಂದು ತೆರೆಗೆ ಬರಲಿದೆ’ ಎಂದರು ನಿರ್ದೇಶಕರು.

ಶ್ರೀಯಾ ಶುಕ್ಲ ನಾಯಕಿ. ಹಿರಿಯ ನಟಿ ಭವ್ಯ, ಶೋಭರಾಜ್, ಶಿವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜ್ ಭಾಸ್ಕರ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಚಿತ್ರಗ್ರಹಣ ಹಾಗೂ ಗುರುಪ್ರಸಾದ್ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.