ತಿರುವನಂತಪುರ: ಬಹುಭಾಷಾ ನಟಿ ಹನಿ ರೋಸ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚೆಮ್ಮನ್ನೂರ್ ಜುವೆಲ್ಲರ್ಸ್ನ ಮಾಲೀಕ ಬಾಬಿ ಚೆಮ್ಮನ್ನೂರ್ ಅಲಿಯಾಸ್ ‘ಬೋಚೆ’ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ರೋಸ್ ಅವರು ಕೊಚ್ಚಿ ಸಿಟಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದರು. ನಿರೀಕ್ಷಣಾ ಜಾಮೀನು ಪಡೆಯುವ ಯತ್ನದಲ್ಲಿದ್ದ ಚೆಮ್ಮನೂರ್ ಅವರನ್ನು ವಯನಾಡ್ನ ಅವರ ತೋಟದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೊಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಬೋಚೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 75 ಸೇರಿದಂತೆ ವಿವಿಧ ಜಾಮೀನು ರಹಿತ ಕಲಂಗಳಡಿ ಪ್ರಕರಣ ದಾಖಲಾಗಿದೆ.

ದೂರು ದಾಖಲಿಸಿದ ಬೆನ್ನಲ್ಲೇ ಪೊಲೀಸರು ತ್ವರಿತವಾಗಿ ಕ್ರಮ ತೆಗೆದುಕೊಂಡಿದ್ದಕ್ಕೆ ನಟಿ ರೋಸ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಪದೇ ಪದೇ ನನ್ನ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿರುವುದು ನೆಮ್ಮದಿ ತರಿಸಿದೆ’ ಎಂದಿದ್ದಾರೆ.

ನಟಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದರು. ನಟಿಗೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ಸಹ ಬೆಂಬಲ ವ್ಯಕ್ತಪಡಿಸಿದೆ.
.ಫೇಸ್ಬುಕ್ನಲ್ಲಿ ನಟಿ ಹನಿ ರೋಸ್ಗೆ ಅಶ್ಲೀಲ ಕಾಮೆಂಟ್; 60 ವರ್ಷದ ವ್ಯಕ್ತಿ ಬಂಧನ.PHOTO Gallery: ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ ಮಲಯಾಳಂನ ಮಾದಕ ನಟಿ ಹನಿ ರೋಸ್.PHOTOS: ಮಲಯಾಳಂನ ಮಾದಕ ನಟಿ ಹನಿ ರೋಸ್ ಇತ್ತೀಚಿನ ಚಿತ್ರಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.