ಶನಿವಾರ, ಆಗಸ್ಟ್ 13, 2022
25 °C

ಡ್ರಗ್ ಮಾಫಿಯಾ: ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ಸ್ನೇಹಿತ ರವಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಅವ್ಯಾಹತವಾಗಿರುವ ಡ್ರಗ್ ದಂಧೆ ಬಗ್ಗೆ ಚುರುಕಿನ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ನಟಿ ರಾಗಿಣಿ ದ್ವಿವೇದಿ ಅವರ ಸ್ನೇಹಿತ ಎನ್ನಲಾದ ರವಿ ಎಂಬಾತನನ್ನು ಬಂಧಿಸಿದ್ದಾರೆ.

ನಟಿಯರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಅನುಮಾನದಡಿ ರವಿಯನ್ನು ಬುಧವಾರವೇ ವಶಕ್ಕೆ ಪಡೆದಿದ್ದ ಪೊಲೀಸರು, ರಾತ್ರಿಯಿಡಿ ವಿಚಾರಣೆ ನಡೆಸಿದ್ದರು. ಅವರು ಭಾಗಿಯಾಗಿದ್ದಕ್ಕೆ ಪುರಾವೆಗಳು ಸಿಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಆರೋಪಿ ರವಿ, ಸಾರಿಗೆ ಇಲಾಖೆ ನೌಕರ. ಹಲವು ವರ್ಷಗಳಿಂದ ರಾಗಿಣಿ ಅವರ ಜೊತೆಯಲ್ಲಿ ಒಡನಾಟವಿಟ್ಟುಕೊಂಡಿದ್ದ.
‘ಡ್ರಗ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದ ರವಿಯನ್ನು ಬಂಧಿಸಲಾಗಿದೆ. ಆತನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಇನ್ನಷ್ಟು... 

ಡ್ರಗ್ಸ್ ದಂಧೆ | ಎಷ್ಟೇ ಪ್ರಭಾವಿಗಳಿದ್ದರೂ ಶಿಕ್ಷೆಗೆ ಒಳಪಡಿಸುತ್ತೇವೆ: ಬೊಮ್ಮಾಯಿ

ಡ್ರಗ್ಸ್ ದಂಧೆ: ನಾಳೆಯೇ ವಿಚಾರಣೆಗೆ ಬನ್ನಿ; ನಟಿ ರಾಗಿಣಿಗೆ ಪೊಲೀಸರ ಎಚ್ಚರಿಕೆ 

ಡ್ರಗ್ಸ್ ದಂಧೆ | ಸಿಸಿಬಿ ಕಚೇರಿಗೆ ಸೋಮವಾರ ಹೋಗುವೆ: ರಾಗಿಣಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು