ಡ್ರಗ್ ಮಾಫಿಯಾ: ಸ್ಯಾಂಡಲ್‌ವುಡ್ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಡ್ರಗ್ ಮಾಫಿಯಾ ಸಂಬಂಧ ನಟಿ ರಾಗಿಣಿ ದ್ವಿವೇದಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ಮಾಫಿಯಾದಲ್ಲಿ ಭಾಗಿಯಾಗಿದ್ದ ಆರೋಪದಡಿ ರಾಗಿಣಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರ ಬೆನ್ನಲ್ಲೇ ಪೊಲೀಸರು, ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ಬಂಧಿಸಿದ್ದರು.
ರಾಗಿಣಿ ಅವರೂ ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿರುವ ಅನುಮಾನ ಪೊಲೀಸರಿಗೆ ಇದೆ. ಅದೇ ಕಾರಣಕ್ಕೆ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿರುವ ರಾಗಿಣಿ ಅವರ ಫ್ಲ್ಯಾಟ್ ಮೇಲೆ ಸಿಸಿಬಿ ದಾಳಿ ಮಾಡಿದೆ. ಮನೆಯಲ್ಲಿ ರಾಗಿಣಿ ಇಲ್ಲವೆಂದು ಗೊತ್ತಾಗಿದೆ.
'ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ರಾಗಿಣಿ ಮನೆ ಮೇಲೆ ಸಿಸಿಬಿಯ ವಿಶೇಷ ತಂಡಗಳು ದಾಳಿ ಮಾಡಿವೆ. ತಪಾಸಣೆ ನಡೆಸುತ್ತಿವೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.