ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಲ ಭಾಗ ಕಡಿತಗೊಳಿಸಿದರೆ ‘ಎಮರ್ಜೆನ್ಸಿ’ಗೆ ಪ್ರಮಾಣಪತ್ರ: CBFC

Published : 26 ಸೆಪ್ಟೆಂಬರ್ 2024, 11:18 IST
Last Updated : 26 ಸೆಪ್ಟೆಂಬರ್ 2024, 11:18 IST
ಫಾಲೋ ಮಾಡಿ
Comments

ಮುಂಬೈ: ಪರಿಷ್ಕರಣಾ ಸಮಿತಿ ಶಿಫಾರಸು ಮಾಡಿದಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಕೆಲ ಭಾಗಗಳನ್ನು ಕಡಿತ ಮಾಡಿದರೆ, ಪ್ರಮಾಣಪತ್ರ ವಿತರಿಸಲಾಗುವುದು ಎಂದು ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

ನಟಿ ಕಂಗನಾ ರನೌತ್‌ ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಅವರು ಈ ಸಿನಿಮಾದ ನಿರ್ದೇಶನವನ್ನೂ ಮಾಡಿದ್ದಾರೆ. ಸೆಪ್ಟೆಂಬರ್‌ 6ರಂದು ತೆರೆ ಕಾಣಬೇಕಿದ್ದ ಸಿನಿಮಾ, ಪ್ರಮಾಣಪತ್ರ ಸಿಗದ ಕಾರಣ ಮಂಡಳಿಯೊಂದಿಗೆ ಕಾನೂನು ಹೋರಾಟ ನಡೆಸುತ್ತಿದೆ.

ಈ ಸಿನಿಮಾದಲ್ಲಿ ಸಿಖ್‌ ಸಮುದಾಯವನ್ನು ತಪ್ಪಾಗಿ ನಿರೂಪಿಸಲಾಗಿದ್ದು, ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಕೆಲ ಸಿಖ್‌ ಸಂಘಟನೆಗಳು ಸಿನಿಮಾ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳದ ಮಂಡಳಿಯನ್ನು ಕಳೆದ ವಾರ ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಫಿರ್ದೋಷ್ ಪೂನಿವಾಲಾ ಅವರಿದ್ದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಸೆ. 25ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ಮಂಡಳಿಗೆ ಸೂಚಿಸಿತ್ತು.

ಸಿನಿಮಾಗೆ ಪ್ರಮಾಣಪತ್ರ ನೀಡಲು ಮಂಡಳಿಗೆ ನಿರ್ದೇಶನ ನೀಡುವಂತೆ ಈ ಸಿನಿಮಾದ ಸಹ ನಿರ್ಮಾಪಕ ಸಂಸ್ಥೆಯಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪೀಠವು ಈ ಕುರಿತ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT