ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್‌ ಬೆಳ್ಳಿ ಪರ್ವ

Published 14 ಫೆಬ್ರುವರಿ 2024, 0:30 IST
Last Updated 14 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ನಟ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ 25 ವರ್ಷಗಳಾಗಿದ್ದು, ಅವರ ನೆಚ್ಚಿನ ಸೆಲೆಬ್ರೆಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳೆಲ್ಲ ಒಟ್ಟಾಗಿ ‘ಬೆಳ್ಳಿ ಪರ್ವ ಡಿ-25’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

‘ಫೆಬ್ರುವರಿ 17ರ ಶನಿವಾರ ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ. ಆದಿಚುಂಚನಗಿರಿ ಶ್ರೀಗಳು, ಸುತ್ತೂರು ಶ್ರೀಗಳು, ಬೀಬಿಮಠದ ಶ್ರೀಗಳು, ಸಂಸದೆ ಸುಮಲತಾ ಅಂಬರೀಶ್ ಮೊದಲಾದವರು ಉಪಸ್ಥಿತರಿರಲಿದ್ದಾರೆ’ ಎಂದು ಕಾರ್ಯಕ್ರಮದ ಉಸ್ತುವಾರಿ ಎಸ್.ಸಚ್ಚಿದಾನಂದ ಇಂಡುವಾಳು ತಿಳಿಸಿದ್ದಾರೆ.

‘ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಹಾಜರಿರುತ್ತಾರೆ’ ಎಂದು ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT