ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮನ್ನು ಭೇಟಿ ಆಗದಿರುವುದಕ್ಕೆ ಕ್ಷಮೆ ಇರಲಿ: ನಟ ದರ್ಶನ್‌ ಟ್ವೀಟ್‌

Last Updated 18 ಫೆಬ್ರುವರಿ 2022, 12:38 IST
ಅಕ್ಷರ ಗಾತ್ರ

ಬೆಂಗಳೂರು: ಜನ್ಮದಿನದ ಸಂದರ್ಭದಲ್ಲಿ ನಿಮ್ಮನ್ನು ಭೇಟಿ ಆಗದಿರುವುದಕ್ಕೆ ಕ್ಷಮೆ ಇರಲಿ ಎಂದು ನಟ ದರ್ಶನ್‌ ತಿಳಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

’ಈ ಸಂದರ್ಭದಲ್ಲಿ ನಿಮ್ಮನ್ನು ಭೇಟಿಯಾಗದ ಕಾರಣ ಕ್ಷಮೆಯಿರಲಿ. ಅದಕ್ಕೆ ಕಾರಣವನ್ನು ಸಹ ತಿಳಿಸಿದ್ದೇನೆ. ಮುಂದಿನ ಬಾರಿ ಖಂಡಿತವಾಗಿಯೂ ನಿಮ್ಮೆಲ್ಲರನ್ನು ಕಾಣುತ್ತೇನೆ’ ಎಂದು ದರ್ಶನ್‌ ಹೇಳಿದ್ದಾರೆ.

ಫೆ.16ರಂದು 45ನೇ ವರ್ಷದ ಜನ್ಮ ದಿನವನ್ನು ದರ್ಶನ್‌ ಆಚರಿಸಿಕೊಂಡಿದ್ದಾರೆ.

ಕೋವಿಡ್‌ ಕಾರಣದಿಂದ ಈ ಬಾರಿಯೂ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳುವುದಾಗಿ ದರ್ಶನ್‌ ಹೇಳಿದ್ದರು. ಈ ಬಗ್ಗೆ ವಿಡಿಯೊ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT