ಚಾಮರಾಜನಗರ: ‘ಕನ್ನಡ ಚಲನಚಿತ್ರ ರಂಗದಲ್ಲಿ ವಿಶೇಷ ಹಾವಭಾವ, ನಟನೆ, ನೇರನುಡಿ ಹಾಗೂ ಸಂಕಷ್ಟಕ್ಕೆ ಸದಾ ಮಿಡಿಯುವ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಂಡಿರುವ ಅಂಬರೀಷ್ ಮಾದರಿ ನಟ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಈಚೆಗೆ ಕಸಾಪ ಹಮ್ಮಿಕೊಂಡಿದ್ದ ಕನ್ನಡ ಚಲನಚಿತ್ರರಂಗಕ್ಕೆ ಅಂಬರೀಷ್ ಕೊಡುಗೆ ಕುರಿತು ಮಾತನಾಡಿ, ‘ಮಳವಳ್ಳಿ ಹುಚ್ಚೇಗೌಡ ಅಮರನಾಥ್ ಕನ್ನಡ ಸಿನಿಮಾ ರಂಗದಲ್ಲಿ ರೆಬೆಲ್ಸ್ಟಾರ್ ಅಂಬರೀಶ್ ಆಗಿ ಬೆಳೆದು ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

ಪ್ರೀತಿ, ವಿಶ್ವಾಸ, ಸ್ನೇಹ, ಸಹಾಯ ಹಸ್ತಕ್ಕೆ ಮಾದರಿಯಾಗಿದ್ದು ಡಾ.ರಾಜಕುಮಾರ್, ವಿಷ್ಣುವರ್ಧನ್ ಅವರ ಸಾಲಿನಲ್ಲಿ ನಿಂತಿದ್ದಾರೆ. ಸಿನಿಮಾ ಕ್ಷೇತ್ರದ ಜೊತೆಗೆ ರಾಜಕಾರಣಕ್ಕೆ ಪ್ರವೇಶಿಸಿ ಯಶಸ್ವಿಯಾದ ಅಂಬರೀಶ್ ಸಂಸದರಾಗಿ, ಕೇಂದ್ರ ಸಚಿವರಾಗಿ, ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು.

ಮಂಡ್ಯದ ಗಂಡು ಎಂದೇ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಅಂಬರೀಶ್ ನೇರ ನಡೆ, ನುಡಿಯಿಂದ ಪ್ರಸಿದ್ಧರಾಗಿದ್ದರು. ಜಾತಿ, ಮತ, ಧರ್ಮ ಬೇಧವಿಲ್ಲದೆ ಸಂಕಷ್ಟದಲ್ಲಿದ್ದ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ಅವರ ಕಲಾಸೇವೆ ರಾಜ್ಯ ಪ್ರಶಸ್ತಿಗಳು ಸಂದಿವೆ ಎಂದರು.

ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ ಮಾತನಾಡಿ ‘ಹಿಂದೆ ಅಂಬರೀಶ್ ಅವರನ್ನು ಜಿಲ್ಲೆಗೆ ಕರೆಸಿದ ಕನ್ನಡ ಸಂಘಟನೆಗಳು ಬೆಳ್ಳಿ ಕಿರೀಟ ಧಾರಣೆ ಮಾಡುವ ಜಿಲ್ಲೆಯ ಪರವಾಗಿ ನಾಗರಿಕ ಸನ್ಮಾನ ನೀಡಿದ್ದರು. ಸ್ನೇಹಮಯ ವ್ಯಕ್ತಿತ್ವದ ಅಂಬರೀಶ್ ಚಲನಚಿತ್ರರಂಗಕ್ಕೆ ಮಾದರಿ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆ ಪದ್ಮಾ ಪುರುಷೋತ್ತಮ್ ಮಾತನಾಡಿದರು. ಸದಸ್ಯ ಶಿವಲಿಂಗ ಮೂರ್ತಿ ಅಂಬರೀಶ್ ಚಲನಚಿತ್ರ ಗೀತೆಗಳನ್ನು ಹಾಡಿದರು. ಸರಸ್ವತಿ, ಬಿ.ಕೆ.ಆರಾಧ್ಯ, ನವೀನ್, ಸುರೇಶ್ ದೊಡ್ಡಮೋಳೆ, ಧನಂಜಯ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-37-446389300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.