ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಾಂಪಿಯನ್’ ಟ್ರೇಲರ್‌: ಮಾಸ್‌ ಸಿನಿಮಾದಲ್ಲಿ ನಟ ಸಚಿನ್ ಧನಪಾಲ್ ಹವಾ...

Last Updated 14 ಸೆಪ್ಟೆಂಬರ್ 2022, 6:08 IST
ಅಕ್ಷರ ಗಾತ್ರ

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ ‘ಚಾಂಪಿಯನ್’ ಚಿತ್ರದ ಟ್ರೇಲರನ್ನು ನಟ ದೇವರಾಜ್ ಅವರು ಇತ್ತೀಚೆಗೆ ಬಿಡುಗಡೆ ಮಾಡಿದರು.‌ ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ.

‘ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್‌ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ ‘ಚಾಂಪಿಯನ್’ ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ.

2019 ರಲ್ಲಿ ಈ ಚಿತ್ರ ಆರಂಭವಾಯಿತು. ನಂತರ ಕೋವಿಡ್.. ಆನಂತರ ನಮ್ಮ ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಅವರ ಹಠಾತ್ ನಿಧನ. ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌. ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ’ ಎಂದರು ನಿರ್ಮಾಪಕ ಶಿವಾನಂದ ಎಸ್. ನೀಲಣ್ಣನವರ್.

‘ನಾನು ಚಿತ್ರದಲ್ಲಿ ನಟಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಏಕೆಂದರೆ ನನ್ನ ತಂದೆ, ತಮ್ಮ ಎಲ್ಲಾ ಸೇನೆಯಲ್ಲಿದ್ದಾರೆ. ನಾನು ಸಹ ಪರೀಕ್ಷೆ ಬರೆದಿದ್ದೆ. ಆದರೆ ಆಯ್ಕೆ ಆಗಲಿಲ್ಲ. ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ನನ್ನ ಸ್ನೇಹಿತ ಶಿವಾನಂದ, ಕೊಟ್ಟ ಮಾತಿನಂತೆ ‘ಚಾಂಪಿಯನ್’ ಚಿತ್ರದ ಮೂಲಕ ನನ್ನನ್ನು ಹೀರೋ ಮಾಡಿದ್ದಾರೆ.

ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ’ ಎಂದರು ನಾಯಕ ಸಚಿನ್ ಧನಪಾಲ್.

‘ನಾನು ಈ ಚಿತ್ರದಲ್ಲಿ ನಟಿಸಲು ಪ್ರಮುಖ ಕಾರಣ ನಿರ್ದೇಶಕ ಶಾಹುರಾಜ್ ಶಿಂಧೆ. ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ’ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು.

‘ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಿದಾಗ ನಾನು, ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದುಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ’ ಎಂದರು ನಟ ದೇವರಾಜ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT