ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಚ್ಚೇದನ ಪಡೆದ ಚಂದನ್‌– ನಿವೇದಿತಾ: ಪೋಸ್ಟ್‌ ಹಂಚಿಕೊಂಡ ಗಾಯಕ ಹೇಳಿದ್ದಿಷ್ಟು

Published 7 ಜೂನ್ 2024, 15:59 IST
Last Updated 7 ಜೂನ್ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದಲ್ಲಿ ಸ್ಟಾರ್‌ ಜೋಡಿ ಎಂದೇ ಖ್ಯಾತಿ ಪಡೆದಿದ್ದ ಗಾಯಕ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ಬೇರೆಯಾಗಲು ನಿರ್ಧರಿಸಿ ವಿಚ್ಚೇದನ ಪಡೆದುಕೊಂಡಿದ್ದಾರೆ. ಈ ಮೂಲಕ 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಚಂದನ್‌ ಶೆಟ್ಟಿ. ‘ಈ ದಿನ, ನಿವೇದಿತಾ ಗೌಡ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. 

ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ 2017ರಲ್ಲಿ ದಸರಾ ಕಾರ್ಯಕ್ರಮದಲ್ಲಿ ಪ್ರೇಮ ನಿವೇದನೆ ಮಾಡಿಕೊಂಡು 2020 ರ ಫೆಬ್ರುವರಿಯಲ್ಲಿ ಮದುವೆಯಾಗಿದ್ದರು. ಬಳಿಕ ರಾಜ–ರಾಣಿ, ಗಿಚ್ಚಿ ಗಿಲಿ ಗಿಲಿ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಂಡಿತ್ತು. 

<div class="paragraphs"><p></p></div>

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT