ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದ್ಯಾರ್ಥಿ’ಯಾದ ಚಂದನ್ ಶೆಟ್ಟಿ 

Published 28 ಮಾರ್ಚ್ 2024, 22:23 IST
Last Updated 28 ಮಾರ್ಚ್ 2024, 22:23 IST
ಅಕ್ಷರ ಗಾತ್ರ

ನಟ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಸದ್ದುಗದ್ದಲವಿಲ್ಲದೆ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಅರುಣ್ ಅಮುಕ್ತ ಆ್ಯಕ್ಷನ್‌–ಕಟ್‌ ಹೇಳಿದ್ದು, ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಬಂಡವಾಳ ಹೂಡಿದ್ದಾರೆ.

‘ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಜೂನ್‌ನಲ್ಲಿ ಬಿಡುಗಡೆ ಆಲೋಚನೆಯಿದೆ. ಚಂದನ್‌ ಶೆಟ್ಟಿ ಪಾತ್ರಕ್ಕೆ ಮೂರು ಶೇಡ್‌ಗಳಿವೆ. ಕಾಲೇಜು ಹುಡುಗರ ಕಥೆ’ ಎಂದರು ನಿರ್ದೇಶಕರು. 

ಭಾವನಾ, ಮಾನಸಿ ಚಂದನ್‌ಗೆ ಜೋಡಿಯಾಗಿದ್ದಾರೆ. ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ರಘು ರಾಮನಕೊಪ್ಪ ಮುಂತಾದವರು ತಾರಾಗಣದಲ್ಲಿದ್ದಾರೆ. ಕುಮಾರ್ ಗೌಡ ಛಾಯಾಚಿತ್ರಗ್ರಹಣ, ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT