ಚಂದನ್ ಶೆಟ್ಟಿ ಅಭಿನಯದ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರ ಕೊನೆಗೂ ತೆರೆಗೆ ಬರಲು ಸಜ್ಜಾಗಿದೆ. ಸಮಯದ ಮಹತ್ವ ಸಾರುವ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಸುಜಯ್ ಶಾಸ್ತ್ರಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ‘ಮಾತು ಮಧುರ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

‘ಕಾರಣಾಂತರದಿಂದ ನಮ್ಮ ಚಿತ್ರ ಬಿಡುಗಡೆ ತಡವಾಗಿದೆ. ಈಗ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದೆ. ಏ.17ರಂದು ಚಿತ್ರ ತೆರೆಗೆ ಬರಲಿದೆ. 90ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನಕಪುರದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣವಾಗಿದೆ. ರಾಜಗುರು ಹೊಸಕೋಟೆ ಕಥೆ ಬರೆದಿದ್ದಾರೆ. ಹಾಸ್ಯಮಯ ಕಥೆಯ ಚಿತ್ರ’ ಎಂದರು ನಿರ್ದೇಶಕ.

ಅರ್ಚನಾ ಕೊಟ್ಟಿಗೆ ಈ ಚಿತ್ರದ ನಾಯಕಿ. ದತ್ತಣ್ಣ, ತಾರಾ ಅನುರಾಧ, ಮಂಜು ಪಾವಗಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರವೀಣ್-ಪ್ರದೀಪ್ ಸಂಗೀತ ನೀಡಿದ್ದಾರೆ. ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರಕ್ಕಾಗಿ ದೇಹದ ತೂಕ ಕೂಡ ಹೆಚ್ಚಿಸಿಕೊಂಡಿದ್ದೆ. ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಲಾಗಿದೆ’ ಎಂದರು ಚಂದನ್ ಶೆಟ್ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.