ಮಂಗಳವಾರ, ಸೆಪ್ಟೆಂಬರ್ 21, 2021
25 °C

ಖಾಸಗಿಯಾಗಿ ನಡೆದ ಚಂದನ್‌ ಶೆಟ್ಟಿ, ನಿವೇದಿತಾ ಗೌಡ ನಿಶ್ಚಿತಾರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಗಾಯಕ ಚಂದನ್‌ಶೆಟ್ಟಿ ಅವರು ಸೋಮವಾರ ಬಿಗ್‌ಬಾಸ್‌ ಸ್ಪರ್ಧಿ ನಿವೇದಿತಾ ಗೌಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರು. 

ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಎರಡು ಕುಟುಂಬಗಳ ಸದಸ್ಯರು, ಬಂಧು ಬಳಗದವರು ಹಾಗೂ ಆಪ್ತ ಗೆಳೆಯರು ಮಾತ್ರ ಹಾಜರಿದ್ದರು.  

ಇದನ್ನೂ ಓದಿ: ದಸರಾ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್: ಚಂದನ್‌ ಶೆಟ್ಟಿಗೆ ಪೊಲೀಸ್‌ ನೋಟಿಸ್‌

ದಸರಾ ಹಬ್ಬದ ಸಂದರ್ಭದಲ್ಲಿ ಯುವ ದಸರಾ ವೇದಿಕೆಯಲ್ಲಿ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಇದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಂದನ್‌ ಶೆಟ್ಟಿ ರಾಜ್ಯದ ಜನರಲ್ಲಿ ಕ್ಷಮೆ ಕೋರಿದ್ದರು. 

ಬಿಗ್‌ಬಾಸ್‌ 5ರಲ್ಲಿ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ಪರ್ಥಿಗಳಾಗಿದ್ದರು. ಈ ವೆಳೆ ಅವರಲ್ಲಿ ಪ್ರೇಮಾಂಕುರವಾಗಿತ್ತು. 

ಇದನ್ನೂ ಓದಿ: ಗಾಯಕ ಚಂದನ್‌ಶೆಟ್ಟಿ ವಿರುದ್ಧ 4 ದೂರುಗಳು ದಾಖಲು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು