ಭಾನುವಾರ, ಸೆಪ್ಟೆಂಬರ್ 26, 2021
21 °C

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ-ನಿವೇದಿತಾ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ

ಮೈಸೂರು: ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ-ನಿವೇದಿತಾ ಗೌಡ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಜರುಗಿತು.

ಬೆಳಗ್ಗೆ 9 ಗಂಟೆಗೆ ಮೀನಾ ಲಗ್ನದಲ್ಲಿ ಚಂದನ್‌ಶೆಟ್ಟಿ ನಿವೇದಿತಾಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಈ ವೇಳೆ ಎರಡು ಕುಟುಂಬಗಳ ಹಿರಿಯರು, ಸಂಬಂಧಿಕರು, ಆಪ್ತರು, ಹಿತೈಷಿಗಳು, ಗೆಳೆಯರು ಸೇರಿದಂತೆ ಚಿತ್ರರಂಗದ ಗಣ್ಯರು ಹಾಜರಿದ್ದರು. 

ನಿವೇದಿತಾ ಗುಲಾಬಿ ಮತ್ತು ಹಸಿರು ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದರು. ಚಂದನ್‌ ಶೆಟ್ಟಿ ಬಿಳಿ ಬಣ್ಣದ ಉಡುಪು ತೊಟ್ಟಿದ್ದರು. ಮಂಗಳವಾರ ಸಂಜೆ ಆರತಕ್ಷತೆ ಕಾರ್ಯಕ್ರಮ ನೇರವೇರಿತ್ತು. ಈ ಸಮಾರಂಭಕ್ಕೆ ನಟರಾದ ಪುನೀತ್ ರಾಜ್‌ಕುಮಾರ್‌, ಧ್ರುವ ಸರ್ಜಾ ಸೇರಿದಂತೆ ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.

ಯುವ ದಸರಾದ ಸರ್ಕಾರಿ ವೇದಿಕೆಯಲ್ಲಿ ಪರಸ್ಪರ ಪ್ರೀತಿ ಹಂಚಿಕೊಂಡಿದ್ದ ಈ ಜೋಡಿ ವಿವಾದಕ್ಕೀಡಾಗಿತ್ತು. ಬಳಿಕ ಮೈಸೂರಿನಲ್ಲಿ ಅದ್ಧೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು